33W ಫಾಸ್ಟ್ ಚಾರ್ಜಿಂಗ್ ಇರುವ Nothing Phone 4b ಮೊಬೈಲ್ ಖರೀದಿಗೆ ಇದುವೇ ಸಕಾಲ!
ಫ್ಲಿಪ್ಕಾರ್ಟ್ನಲ್ಲಿ ನಥಿಂಗ್ ಫೋನ್ 4b ಫೋನಿಗೆ ಬೆಸ್ಟ್ ಆಫರ್
ನಥಿಂಗ್ ಫೋನ್ 4b ಮೊಬೈಲ್ 6,000mAh ಬ್ಯಾಟರಿ ಪಡೆದಿದೆ
ನಥಿಂಗ್ ಫೋನ್ 4b ಸ್ಮಾರ್ಟ್ಫೋನ್ ಆಕರ್ಷಕ ಕಲರ್ಗಳಲ್ಲಿ ಲಭ್ಯ
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ಆಯ್ದ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ Nothing Phone 4b ಸ್ಮಾರ್ಟ್ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಸ್ನಾಪ್ಡ್ರಾಗನ್ 6 ಜೆನ್ 4 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ನಥಿಂಗ್ ಫೋನ್ 4b ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Nothing Phone 4b ಮೊಬೈಲ್ ಈಗ ಆಫರ್ನಲ್ಲಿ ಲಭ್ಯ
ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ನಥಿಂಗ್ ಫೋನ್ 4b ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 49,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 34,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಬ್ಲ್ಯಾಕ್, ಬ್ಲೂ ಮತ್ತು ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ನಥಿಂಗ್ ಫೋನ್ 4b ಮೊಬೈಲ್ ಫೀಚರ್ಸ್
ನಥಿಂಗ್ ಫೋನ್ 4b ಸ್ಮಾರ್ಟ್ಫೋನ್ 6.77 ಇಂಚಿನ ಪೂರ್ಣ HD+ ಡಿಸ್ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 2,000 ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಸ್ನಾಪ್ಡ್ರಾಗನ್ 6 ಜೆನ್ 4 ಚಿಪ್ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB ಹಾಗೂ 8GB + 256GB ವೇರಿಯಂಟ್ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್ 16 ಆಧಾರಿತ ನಥಿಂಗ್ ಓಎಸ್ 4.1 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ನಥಿಂಗ್ ಫೋನ್ 4b ಸ್ಮಾರ್ಟ್ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದ್ದು, ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 6,000mAh ಬ್ಯಾಟರಿ ಬ್ಯಾಕ್ಅಪ್ ಸಪೋರ್ಟ್ ಜೊತೆಗೆ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 7.5W ವೈರ್ಡ್ ರಿವರ್ಸ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.