ಜನಪ್ರಿಯ ನಥಿಂಗ್ ಮೊಬೈಲ್ ಕಂಪನಿಯು ಹೊಸದಾಗಿ Nothing Phone 4b ಮೊಬೈಲ್ ಅನ್ನು ಇಂದು (ಜುಲೈ 7 ರಂದು) ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದರೊಂದಿಗೆ ಕಂಪನಿಯು ನಥಿಂಗ್ ಫೋನ್ 4b RCB Edition ಮೊಬೈಲ್ ಅನ್ನು ಸಹ ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಪಡೆದುಕೊಂಡಿದೆ. ಅಲ್ಲದೇ ಇದು 6,000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಈ ಮೊಬೈಲ್ ಬ್ಲ್ಯಾಕ್, ಬ್ಲೂ ಮತ್ತು ವೈಟ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ನಥಿಂಗ್ ಫೋನ್ 4b ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Jio ಕಂಪನಿಯ ಈ ಪ್ಲಾನ್‌ಗಳಲ್ಲಿ 20GB ಡೇಟಾ ಉಚಿತ; ಆಕರ್ಷಕ ವ್ಯಾಲಿಡಿಟಿ
ನಥಿಂಗ್ ಕಂಪನಿಯ ನಥಿಂಗ್ ಫೋನ್ 4b ಮೊಬೈಲ್ ಮೂರು ವೇರಿಯಂಟ್ ಆಯ್ಕೆಗಳಲ್ಲಿ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್ 34,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 256GB ಸ್ಟೋರೇಜ್ ವೇರಿಯಂಟ್ ಮಾಡೆಲ್ 38,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಬ್ಲ್ಯಾಕ್, ಬ್ಲೂ ಮತ್ತು ವೈಟ್ ಆಗಿವೆ. ಇನ್ನು ಈ ಫೋನ್ ಜುಲೈ 14 ರಂದು ಫ್ಲಿಪ್‌ಕಾರ್ಟ್, ಕ್ರೋಮಾ, ರಿಲಯನ್ಸ್ ಡಿಜಿಟಲ್, ವಿಜಯ್ ಸೇಲ್ಸ್ ಸೇರಿದಂತೆ ರಿಟೇಲ್ ಸ್ಟೋರ್ ಮೂಲಕ ಮಾರಾಟಕ್ಕೆ ಬರಲಿದೆ. ಅಂದಹಾಗೆ RCB Edition ಮೊಬೈಲ್ ಪ್ರಸ್ತುತ ಬೆಂಗಳೂರಿನಲ್ಲಿರುವ ನಥಿಂಗ್‌ನ ಪ್ರಮುಖ ಅಂಗಡಿಯಲ್ಲಿ ಸೀಮಿತ ಡ್ರಾಪ್ ಈವೆಂಟ್ ಮೂಲಕ ಲಭ್ಯವಿದೆ.
ನಥಿಂಗ್ ಫೋನ್ 4b ಮೊಬೈಲ್ 6.77 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 2,000 ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB ಹಾಗೂ 8GB + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ ನಥಿಂಗ್ ಓಎಸ್ 4.1 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ನಥಿಂಗ್ ಫೋನ್ 4b ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದ್ದು, ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 7.5W ವೈರ್ಡ್ ರಿವರ್ಸ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.