ಇತ್ತೀಚಿನ Nothing Phone 4b ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಕರ್ಷಕ ಫೀಚರ್ಸ್‌

HIGHLIGHTS

ಅಮೆಜಾನ್‌ ಸೇಲ್‌ನಲ್ಲಿ ನಥಿಂಗ್ ಫೋನ್‌ 4b ಫೋನಿಗೆ ಬೆಸ್ಟ್‌ ಕೊಡುಗೆ

ನಥಿಂಗ್ ಫೋನ್‌ 4b ಫೋನ್‌ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಬೆಂಬಲ ಪಡೆದಿದೆ

ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 6 ಜೆನ್‌ 4 ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದೆ

ಇತ್ತೀಚಿನ Nothing Phone 4b ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಕರ್ಷಕ ಫೀಚರ್ಸ್‌

ಇ ಕಾಮರ್ಸ್‌ ದೈತ್ಯ ಎನಿಸಿರುವ ಅಮೆಜಾನ್‌ನ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಕಂಪನಿಯ Nothing Phone 4b ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಸ್ನಾಪ್‌ಡ್ರಾಗನ್ 6 ಜೆನ್‌ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 6,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಬ್ಲ್ಯಾಕ್‌, ಬ್ಲೂ ಮತ್ತು ವೈಟ್‌ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ನಥಿಂಗ್ ಫೋನ್‌ 4b ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಬಜೆಟ್‌ ಬೆಲೆಯ iQOO Z11 Lite ಸ್ಮಾರ್ಟ್‌ಫೋನ್‌ಗೆ ಈಗ ಮತ್ತಷ್ಟು ಆಕರ್ಷಕ ಡಿಸ್ಕೌಂಟ್‌!

Nothing Phone 4b ಫೋನಿಗೆ ಬೊಂಬಾಟ್‌ ಆಫರ್‌

ಡಿಸೈನ್‌ ಹಾಗೂ ಫೀಚರ್ಸ್‌ ಮೂಲಕ ಮಾರುಕಟ್ಟೆಯ ಗಮನ ಸೆಳೆದಿರುವ ನಥಿಂಗ್ ಫೋನ್‌ 4b ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭಾರೀ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 54,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 31,535 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಬ್ಲ್ಯಾಕ್‌, ಬ್ಲೂ ಮತ್ತು ವೈಟ್‌ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ನಥಿಂಗ್ ಫೋನ್‌ 4b ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Nothing Phone 4b India Sale Today via Flipkart Check Price offers Specifications
Nothing Phone 4b

ನಥಿಂಗ್ ಫೋನ್‌ 4b ಮೊಬೈಲ್‌ ಫೀಚರ್ಸ್‌

ನಥಿಂಗ್ ಫೋನ್‌ 4b ಸ್ಮಾರ್ಟ್‌ಫೋನ್‌ 6.77 ಇಂಚಿನ ಪೂರ್ಣ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 2,000 ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 6 ಜೆನ್‌ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 8GB + 128GB ಹಾಗೂ 8GB + 256GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್‌ 16 ಆಧಾರಿತ ನಥಿಂಗ್ ಓಎಸ್ 4.1 ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ನಥಿಂಗ್ ಫೋನ್‌ 4b ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದ್ದು, ದ್ವಿತೀಯ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೌಲಭ್ಯ ಪಡೆದಿವೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 7.5W ವೈರ್ಡ್ ರಿವರ್ಸ್ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile