ಒನ್‌ಪ್ಲಸ್ ಕಂಪನಿಯ ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಸದ್ಯ ನೀವೇನಾದರೂ ಒನ್‌ಪ್ಲಸ್ ಮೊಬೈಲ್ ಖರೀದಿಸುವ ಪ್ಲಾನ್ ಹೊಂದಿದ್ದರೆ ನಿಮಗೆ ಸಿಹಿಸುದ್ದಿ ಇದೆ. ಹೌದು, ಪ್ರಸ್ತುತ Amazon ಇ ಕಾಮರ್ಸ್ ತಾಣದಲ್ಲಿ ಒನ್‌ಪ್ಲಸ್ ಸಂಸ್ಥೆಯ OnePlus 13 ಸ್ಮಾರ್ಟ್‌ಫೋನ್ ಗಮನಾರ್ಹ ಡಿಸ್ಕೌಂಟ್ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಗೂಗಲ್‌ನ ಈ ಮೊಬೈಲ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ ಇದು Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್ Nebula Noir ಮತ್ತು Astral Trail ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಒನ್‌ಪ್ಲಸ್ 13 ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
Also Read : ಅತ್ಯುತ್ತಮ ಕ್ಯಾಮೆರಾ ಇರುವ Google Pixel 9a ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ!
ಒನ್‌ಪ್ಲಸ್ 13 ಸ್ಮಾರ್ಟ್‌ಫೋನ್ ಸದ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಸಖತ್ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ವೇರಿಯಂಟ್ ಬೆಲೆ 49,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 39,996 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಫೋನ್ Nebula Noir ಹಾಗೂ Astral Trail ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.
ಒನ್‌ಪ್ಲಸ್ 13 ಮೊಬೈಲ್ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.82 ಇಂಚಿನ QHD+ LTPO 3K ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 4,500 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 1080 x 2424 ಪಿಕ್ಸೆಲ್‌ಗಳ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಈ ಮೊಬೈಲ್ Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 24GB RAM ಮತ್ತು 1TB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಹಾಗೆಯೇ ಒನ್‌ಪ್ಲಸ್ 13 ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾವು 50MP ಹಾಗೂ ತೃತೀಯ ಕ್ಯಾಮೆರಾ ಸಹ 50MP ಸೆನ್ಸಾರ್ ಆಗಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 6,000 mAh ಬ್ಯಾಟರಿ ಸೌಲಭ್ಯ ಪಡೆದಿರುವ ಜೊತೆಗೆ 100W ವೇಗದ ಚಾರ್ಜಿಂಗ್ ಬೆಂಬಲ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಹೊಂದಿದೆ.