12GB RAM ಇರುವ OnePlus 13 ಮೊಬೈಲ್‌ ಈಗ ಭಾರೀ ಬೆಲೆ ಇಳಿಕೆಯಲ್ಲಿ ಲಭ್ಯ!

HIGHLIGHTS

ಅಮೆಜಾನ್‌ನಲ್ಲಿ ಒನ್‌ಪ್ಲಸ್‌ 13 ಮೊಬೈಲ್‌ ಭಾರೀ ಆಫರ್‌ನಲ್ಲಿ ಲಭ್ಯ

ಒನ್‌ಪ್ಲಸ್‌ 13 ಮೊಬೈಲ್‌ 50MP ಪ್ರಾಥಮಿಕ ಕ್ಯಾಮೆರಾ ರಚನೆ ಪಡೆದುಕೊಂಡಿದೆ

ಒನ್‌ಪ್ಲಸ್‌ 13 ಫೋನ್ Snapdragon 8 Elite ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿದೆ

12GB RAM ಇರುವ OnePlus 13 ಮೊಬೈಲ್‌ ಈಗ ಭಾರೀ ಬೆಲೆ ಇಳಿಕೆಯಲ್ಲಿ ಲಭ್ಯ!

ಜನಪ್ರಿಯ ಒನ್‌ಪ್ಲಸ್‌ ಮೊಬೈಲ್‌ ಕಂಪನಿಯ OnePlus 13 ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಆಕರ್ಷಕ ಫೀಚರ್ಸ್‌ಗಳೊಂದಿಗೆ ಗಮನ ಸೆಳೆದಿರುವ ಈ ಸ್ಮಾರ್ಟ್‌ಫೋನ್‌ ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಭರ್ಜರಿ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಆಯ್ದ ಬ್ಯಾಂಕ್‌ ಕೊಡುಗೆಗಳ ಮೂಲಕ ಗ್ರಾಹಕರು ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್‌ Snapdragon 8 Elite ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿದ್ದು, ಹಾಗೆಯೇ 50MP ಸೌಲಭ್ಯದ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡ್‌ನೈಟ್‌ ಓಶಿಯನ್ ಹಾಗೂ ಬ್ಲ್ಯಾಕ್‌ ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಇನ್ನುಳಿದಂತೆ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್‌ 13 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 7300mAh ಬ್ಯಾಟರಿ ಇರುವ Vivo T4R 5G ಮೊಬೈಲ್‌ ಈಗ ಆಫರ್‌ನಲ್ಲಿ ಲಭ್ಯ!

OnePlus 13 ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ

ಜನಪ್ರಿಯ ಒನ್‌ಪ್ಲಸ್‌ 13 ಮೊಬೈಲ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭಾರೀ ಡಿಸ್ಕೌಂಟ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ 72,999 ರೂ.ಗಳ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 62,999 ರೂ.ಗಳ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಫೋನ್‌ ಮೀಡ್‌ನೈಟ್‌ ಓಶಿಯನ್ ಹಾಗೂ ಬ್ಲ್ಯಾಕ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

OnePlus 13

ಒನ್‌ಪ್ಲಸ್‌ 13 ಸ್ಮಾರ್ಟ್‌ಫೋನ್‌ ಫೀಚರ್ಸ್‌

ಒನ್‌ಪ್ಲಸ್‌ 13 ಸ್ಮಾರ್ಟ್‌ಫೋನ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.82 ಇಂಚಿನ QHD+ LTPO 3K ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 4,500 ನಿಟ್ಸ್‌ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 1080 x 2424 ಪಿಕ್ಸೆಲ್‌ಗಳ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಈ ಮೊಬೈಲ್‌ Snapdragon 8 Elite ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 24GB RAM ಮತ್ತು 1TB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

ಹಾಗೆಯೇ ಒನ್‌ಪ್ಲಸ್‌ 13 ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದರ ದ್ವಿತೀಯ ಕ್ಯಾಮೆರಾವು 50MP ಹಾಗೂ ತೃತೀಯ ಕ್ಯಾಮೆರಾ ಸಹ 50MP ಸೆನ್ಸಾರ್‌ ಆಗಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 32MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ 6,000 mAh ಬ್ಯಾಟರಿ ಸೌಲಭ್ಯ ಪಡೆದಿರುವ ಜೊತೆಗೆ 100W ವೇಗದ ಚಾರ್ಜಿಂಗ್ ಬೆಂಬಲ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile