ಒನ್‌ಪ್ಲಸ್ ಮೊಬೈಲ್ ಕಂಪನಿಯ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ನಲ್ಲಿ ಗುರುತಿಸಿಕೊಂಡಿರುವ OnePlus 13 ಮೊಬೈಲ್ ಕ್ಯಾಮೆರಾ, ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 50MP ಸೆನ್ಸಾರ್ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಈ ಫೋನ್ Nebula Noir ಹಾಗೂ Astral Trail ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಅಮೆಜಾನ್‌ನಲ್ಲಿ ಇ ಕಾಮರ್ಸ್ ತಾಣದಲ್ಲಿ ಒನ್‌ಪ್ಲಸ್ 13 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಟ್ರಿಪಲ್ ಕ್ಯಾಮೆರಾ ಇರುವ Samsung Galaxy M56 5G ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ!
ಆಕರ್ಷಕ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಒನ್‌ಪ್ಲಸ್ ಮೊಬೈಲ್ ಕಂಪನಿಯ ಒನ್‌ಪ್ಲಸ್ 13 ಮೊಬೈಲ್ ಅಮೆಜಾನ್‌ನಲ್ಲಿ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 72,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 57,998 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರ ಜೊತೆಗೆ ಗ್ರಾಹಕರಿಗೆ ಆಕರ್ಷಕ EMI ಆಯ್ಕೆಗಳು ಸಹ ಸಿಗುತ್ತವೆ. ಇನ್ನು ಈ ಮೊಬೈಲ್ Nebula Noir ಹಾಗೂ Astral Trail ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ಒನ್‌ಪ್ಲಸ್ 13 ಮೊಬೈಲ್ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.82 ಇಂಚಿನ QHD+ LTPO 3K ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 4,500 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 1080 x 2424 ಪಿಕ್ಸೆಲ್‌ಗಳ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಈ ಮೊಬೈಲ್ Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 24GB RAM ಮತ್ತು 1TB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಹಾಗೆಯೇ ಒನ್‌ಪ್ಲಸ್ 13 ಮೊಬೈಲ್ ಹಿಂಭಾಗದಲ್ಲಿ ಟ್ರಿಪಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾವು 50MP ಹಾಗೂ ತೃತೀಯ ಕ್ಯಾಮೆರಾ ಸಹ 50MP ಸೆನ್ಸಾರ್ ಆಗಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 6,000 mAh ಬ್ಯಾಟರಿ ಸೌಲಭ್ಯ ಪಡೆದಿರುವ ಜೊತೆಗೆ 100W ವೇಗದ ಚಾರ್ಜಿಂಗ್ ಬೆಂಬಲ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಹೊಂದಿದೆ.