ಈಗಾಗಲೇ ಮೊಬೈಲ್ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ OnePlus 13 ಸ್ಮಾರ್ಟ್‌ಫೋನ್ ಇದೀಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡು ಮತ್ತೆ ಗ್ರಾಹಕರನ್ನು ಆಕರ್ಷಿಸಿದೆ. ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಫೋನ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಎಲೈಟ್ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 6,000 mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಈ ಮೊಬೈಲ್ Nebula Noir ಹಾಗೂ Astral Trail ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್ 13 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Unlimited ಡೇಟಾ ಸೌಲಭ್ಯ ಒಳಗೊಂಡ Vi ಟೆಲಿಕಾಂನ ಅತ್ಯುತ್ತಮ ಪ್ಲಾನ್‌ಗಳ ಲಿಸ್ಟ್ ನೋಡಿ
ಫ್ಲಾಗ್‌ಶಿಪ್ ಮಾದರಿಯ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ಒನ್‌ಪ್ಲಸ್ 13 ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 72,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 57,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್ Nebula Noir ಹಾಗೂ Astral Trail ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.
ಒನ್‌ಪ್ಲಸ್ 13 ಸ್ಮಾರ್ಟ್‌ಫೋನ್ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.82 ಇಂಚಿನ QHD+ LTPO 3K ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರ ಸ್ಕ್ರೀನ್ 4,500 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 1080 x 2424 ಪಿಕ್ಸೆಲ್‌ಗಳ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಈ ಮೊಬೈಲ್ Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 24GB RAM ಮತ್ತು 1TB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ಇನ್ನು ಒನ್‌ಪ್ಲಸ್ 13 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಟ್ರಿಪಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಮೊದಲ ಕ್ಯಾಮೆರಾ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದರ ದ್ವಿತೀಯ ಕ್ಯಾಮೆರಾವು 50MP ಹಾಗೂ ತೃತೀಯ ಕ್ಯಾಮೆರಾ ಸಹ 50MP ಸೆನ್ಸಾರ್ ಆಗಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 6,000 mAh ಬ್ಯಾಟರಿ ಸೌಲಭ್ಯ ಪಡೆದಿರುವ ಜೊತೆಗೆ 100W ವೇಗದ ಚಾರ್ಜಿಂಗ್ ಬೆಂಬಲ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಹೊಂದಿದೆ.