ಪ್ರಸ್ತುತ ನೀವು ಡಿಸ್ಕೌಂಟ್ ಬೆಲೆಯಲ್ಲಿ ಹೊಸ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್ ಖರೀದಿಸಲು ಪ್ಲಾನ್ ಮಾಡಿದ್ದರೆ OnePlus 13 ಸ್ಮಾರ್ಟ್‌ಫೋನ್‌ನತ್ತ ಗಮನಿಸಬಹುದು. ಏಕೆಂದರೆ ಒನ್‌ಪ್ಲಸ್ ಸಂಸ್ಥೆಯ OnePlus 13 ಸ್ಮಾರ್ಟ್‌ಫೋನ್ Vijay Sales ವೆಬ್‌ಸೈಟ್‌ನಲ್ಲಿ ಗಮನಾರ್ಹ ರಿಯಾಯಿತಿ ಪಡೆದುಕೊಂಡಿದೆ. ಅಲ್ಲದೇ ಗ್ರಾಹಕರು Axis ಬ್ಯಾಂಕ್ ಮತ್ತು HDFC ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್ ಕ್ವಾಲ್ಕಮ್ Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದೆ. ಹಾಗೆಯೇ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. Vijay Sales ವೆಬ್‌ಸೈಟ್‌ನಲ್ಲಿ OnePlus 13 ಫೋನಿಗೆ ಲಭ್ಯವಿರುವ ಕೊಡುಗೆಯ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Motorola ಕಂಪನಿಯ ಈ Soundbar 7,999 ರೂಗಳಿಗೆ ಲಭ್ಯ! ಆಫರ್ ಬಗ್ಗೆ ಇಲ್ಲಿದೆ ಮಾಹಿತಿ
ಪ್ರಮುಖ ಲೀಡಿಂಗ್ ಮೊಬೈಲ್ ಬ್ರ್ಯಾಂಡ್‌ಗಳ ಪೈಕಿ ಒಂದಾಗಿರುವ ಒನ್‌ಪ್ಲಸ್ ಕಂಪನಿಯ OnePlus 13 ಫೋನ್ ಪ್ರಸ್ತುತ ಭಾರೀ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್ ಭಾರತದಲ್ಲಿ 69,999 ರೂಗಳ ಆರಂಭಿಕ ಬೆಲೆಯೊಂದಿಗೆ ಬಿಡುಗಡೆ ಮಾಡಲಾಗಿತ್ತು. ಸದ್ಯ Vijay Sales ನ ಅಧಿಕೃತ ವೆಬ್‌ಸೈಟ್‌ನಲ್ಲಿ OnePlus 13 ಫ್ಲ್ಯಾಗ್‌ಶಿಪ್ ಮೊಬೈಲ್ 61,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, 8,000 ರೂಗಳ ಫ್ಲಾಟ್ ರಿಯಾಯಿತಿ ಪಡೆದುಕೊಂಡಿದೆ. ಇದಲ್ಲದೇ ಆಸಕ್ತ ಗ್ರಾಹಕರು Axis ಬ್ಯಾಂಕ್ ಮತ್ತು HDFC ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್ EMI ವಹಿವಾಟುಗಳ ಮೂಲಕ ಖರೀದಿಸಿದರೆ 4,000 ರೂಗಳ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ.
ಒನ್‌ಪ್ಲಸ್ ಕಂಪನಿಯ OnePlus 13 ಸ್ಮಾರ್ಟ್‌ಫೋನ್ 6.82 ಇಂಚಿನ QHD+ LTPO 3K ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಹಾಗೆಯೇ ಇದು HDR10+ ಸಪೋರ್ಟ್ ಜೊತೆಗೆ ಇದರ ಸ್ಕ್ರೀನ್ 4,500 ನಿಟ್‌ಗಳ ಗರಿಷ್ಠ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಪ್ರಮುಖವಾಗಿ ಈ ಫೋನ್ ಅಡ್ರಿನೊ 830 GPU ನೊಂದಿಗೆ ಕ್ವಾಲ್ಕಮ್ Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಈ ಮೊಬೈಲ್ 24GB ವರೆಗೆ RAM ಆಯ್ಕೆ ಮತ್ತು 1TB ವರೆಗೆ UFS 4.0 ಸ್ಟೋರೇಜ್ ಸೌಲಭ್ಯವನ್ನು ಪಡೆದುಕೊಂಡಿದೆ.
OnePlus 13 ಸ್ಮಾರ್ಟ್‌ಫೋನ್ ಫೋಟೋಗ್ರಫಿಗಾಗಿ ಉತ್ತಮ ಕ್ಯಾಮೆರಾ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಹೊಂದಿದ್ದು ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್ ಆಗಿದೆ. ದ್ವಿತೀಯ ಕ್ಯಾಮೆರಾವು 3x ಆಪ್ಟಿಕಲ್ ಜೂಮ್ ಜೊತೆಗೆ 50MP ಟೆಲಿಫೋಟೋ ಸೆನ್ಸರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ತೃತೀಯ ಕ್ಯಾಮೆರಾವು 120x ಡಿಜಿಟಲ್ ಜೂಮ್ ಒಳಗೊಂಡ 50MP ಅಲ್ಟ್ರಾ ವೈಡ್ ಸೆನ್ಸರ್ ಸೌಲಭ್ಯ ಪಡೆದಿದೆ. ಇನ್ನು ಸೆಲ್ಫಿಗಳು ಹಾಗೂ ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಉಳಿದಂತೆ ಇದು 100W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಒಳಗೊಂಡಿದೆ. ಇದಕ್ಕೆ ಪೂರಕವಾಗಿ 6,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇನ್ನು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ಮತ್ತು IP69 ರೇಟಿಂಗ್ ಸೌಲಭ್ಯ ಒಳಗೊಂಡಿದೆ.