OnePlus 13 Silently Dropped Price in India: ಭಾರತದಲ್ಲಿ ಜನಪ್ರಿಯ ಸ್ಮಾರ್ಟ್ಫೋನ್ ಬ್ರಾಂಡ್ ಒನ್ ಪ್ಲಸ್ (OnePlus) ಈಗ ತನ್ನ ಜನಪ್ರಿಯ ಮತ್ತು ಅತಿ ಹೆಚ್ಚಾಗಿ ಮಾರಾಟವಾಗುತ್ತಿರುವ ಬೆಸ್ಟ್ ಡೀಲ್ ಜೊತೆಗೆ ಬರುವ ಈ OnePlus 13 ಸ್ಮಾರ್ಟ್ಫೋನ್ ಬೆಲೆಯಲ್ಲಿ ಭಾರಿ ಕಡಿತಗೊಳಿಸಿದ್ದು ಭಾರಿ ಡೀಲ್ ಮತ್ತು ಡಿಸ್ಕೌಂಟ್‌ನೊಂದಿಗೆ ಮಾರಾಟವಾಗುತ್ತಿದೆ. OnePlus 13 ಸ್ಮಾರ್ಟ್ಫೋನ್ ಆರಂಭಿಕ 12GB RAM ಮತ್ತು 256GB ಸ್ಟೋರೇಜ್ ₹69,998 ರೂಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಇದರ ಮೇಲೆ ಬ್ಯಾಂಕ್ ಆಫರ್ 5000 ರೂಗಳ ಹೆಚ್ಚುವರಿಯ ಡಿಸ್ಕೌಂಟ್ ಸಹ ಪಡೆಯಬಹುದು. ನೀವು ಈ ಲೇಟೆಸ್ಟ್ ಈ OnePlus 13 ಸ್ಮಾರ್ಟ್ಫೋನ್ ಖರೀದಿಸಲು ಬಯಸಿದರೆ ಒಂದಿಷ್ಟು ಮಾಹಿತಿ ಈ ಕೆಳಗೆ ನೀಡಲಾಗಿದೆ.
ನಿಮಗೆ ಈ ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸಲಾಗಿದೆ. ಮೊದಲನೆಯದು 12GB RAM ಮತ್ತು 256GB ಸ್ಟೋರೇಜ್ ಇದನ್ನು ನೀವು ಕೇವಲ ₹69,998 ರೂಗಳಿಗೆ ಪಟ್ಟಿ ಮಾಡಲಾಗಿದ್ದು ಇದರ ಕ್ರಮವಾಗಿ 16GB RAM ಮತ್ತು 512GB ಸ್ಟೋರೇಜ್ ಇದನ್ನು ₹76,998 ರೂಗಳಿಗೆ ಮತ್ತು ಕೊನೆಯದಾಗಿ ಇದರ 24GB RAM ಮತ್ತು 1024GB ಸ್ಟೋರೇಜ್ ಇದನ್ನು ₹89,998 ರೂಗಳಿಗೆ ಪಟ್ಟಿ ಮಾಡಲಾಗಿದ್ದು ಆದರೆ ನೀವು ಈ ಸ್ಮಾರ್ಟ್ಫೋನ್ ಅನ್ನು ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿಕೊಂಡು 5000 ರೂಗಳ ತ್ವರಿತ ಡಿಸ್ಕೌಂಟ್ ಪಡೆಯಬಹುದು. ಈ ಮೂಲಕ ಆರಂಭಿಕ ಸುಮಾರು 64,999 ರೂಗಳಿಗೆ ಖರೀದಿಸಬಹುದು.
ಅಲ್ಲದೆ ನೀವು ಈ ಫೋನ್ ಮೇಲೆ ಅಮೆಜಾನ್ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ OnePlus 13 ಸ್ಮಾರ್ಟ್ಫೋನ್ ಖರೀದಿಸಲು ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 39,500 ರೂಗಳ ವರೆಗೆ ಡಿಸ್ಕೌಂಟ್ ಪಡೆಯಬಹುದು. ಆದರೆ ಈ ಡೀಲ್ ಬೆಲೆಯನ್ನು ನಿಮ್ಮ ಹಳೆ ಫೋನಿನ ಸ್ಥಿತಿಯ ಮೇಲೆ ನಿರ್ಧರಿಸಲಾಗುತ್ತದೆ ಎಂಬುದನ್ನು ನೀವು ನೆನಪಿನಲ್ಲಿಡಿ.
Also Read: PAN Card 2025: ನಿಮ್ಮ ಪ್ಯಾನ್ ಕಾರ್ಡ್‌ನಲ್ಲಿರುವ ಹಳೆ ಫೋಟೋವನ್ನು ಈ ರೀತಿ ಸರಳವಾಗಿ ಬದಲಾಯಿಸಬಹುದು!
OnePlus 13 ಸ್ಮಾರ್ಟ್ಫೋನ್ ಮಾದರಿಯಂತೆ ನಿರೀಕ್ಷಿಸಬಹುದಾಗಿದ್ದು ಇದರ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಸೋನಿ LYT 808 ಪ್ರೈಮರಿ ಸೆನ್ಸರ್ 3x ಆಪ್ಟಿಕಲ್ ಜೂಮ್‌ನೊಂದಿಗೆ 50MP ಸೋನಿ LYT600 ಟೆಲಿಫೋಟೋ ಲೆನ್ಸ್ ಮತ್ತು 50MP Samsung JN1 ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ.
ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 32MP ಸೋನಿ IMX612 ಮುಂಭಾಗದ ಕ್ಯಾಮೆರಾವನ್ನು ಒಳಗೊಳ್ಳಲಿದೆ. ಅಲ್ಲದೆ ಇನ್-ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಒಳಗೊಂಡಿದೆ. OnePlus 12 ಫೋನ್ ಹೊಂದಿರುವ ಅದೇ ಕ್ಯಾಮೆರಾ ಸೆನ್ಸರ್ ಅನ್ನು ಮುಂದೂಡಿಸುವ ನಿರೀಕ್ಷೆಗಳಿವೆ.
ಈ ಸ್ಮಾರ್ಟ್ಫೋನ್ Snapdragon 8 Elite Gen 3 ಪ್ರೊಸೆಸರ್‌ನಿಂದ ಚಾಲಿತವಾಗುವ ನಿರೀಕ್ಷೆಯಾಗಿದ್ದು 12GB ವರೆಗಿನ LPDDR5X RAM ಮತ್ತು 1024GB ವರೆಗಿನ UFS 4.0 ಸ್ಟೋರೇಜ್ ಅನ್ನು ಬೆಂಬಲಿಸುತ್ತದೆ. ಈ ಫೋನ್ 100W SuperVOOC ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ ಬೃಹತ್ 6000mAh ಬ್ಯಾಟರಿಯನ್ನು ಪ್ಯಾಕ್ ಮಾಡಬಹುದು. ಇದು 50W ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ ಮತ್ತು ಮ್ಯಾಗ್ನೆಟಿಕ್ ಚಾರ್ಜಿಂಗ್‌ನೊಂದಿಗೆ ಹೊಂದಾಣಿಕೆಯನ್ನು ಒಳಗೊಂಡಿದೆ.