ಡಿಸ್ಕೌಂಟ್‌ನಲ್ಲಿ OnePlus 13R ಖರೀದಿಸುವ ಪ್ಲಾನ್‌ ಇದ್ರೆ, ಈ ಚಾನ್ಸ್‌ ಕಳ್ಕೋಬೇಡಿ!

HIGHLIGHTS

ಒನ್‌ಪ್ಲಸ್‌ 13R ಫೋನ್‌ಗೆ ಅಮೆಜಾನ್‌ನಲ್ಲಿ ಬಿಗ್‌ ಡಿಸ್ಕೌಂಟ್‌

ಒನ್‌ಪ್ಲಸ್‌ನ ಈ ಫೋನ್‌ Snapdragon 8 Gen 3 ಪ್ರೊಸೆಸರ್‌ ಪಡೆದುಕೊಂಡಿದೆ

ಒನ್‌ಪ್ಲಸ್‌ ಸಂಸ್ಥೆಯ ಮೊಬೈಲ್‌ Nebula Noir ಹಾಗೂ Astral Trail ಕಲರ್‌ ಒಳಗೊಂಡಿದೆ

ಡಿಸ್ಕೌಂಟ್‌ನಲ್ಲಿ OnePlus 13R ಖರೀದಿಸುವ ಪ್ಲಾನ್‌ ಇದ್ರೆ, ಈ ಚಾನ್ಸ್‌ ಕಳ್ಕೋಬೇಡಿ!

OnePlus ಬ್ರಾಂಡ್‌ನ ಮೊಬೈಲ್‌ಗಳು ಈಗಾಗಲೇ ದೇಶೀಐ ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ನೀವೇನಾದರೂ OnePlus ಕಂಪನಿಯ ಮೊಬೈಲ್‌ ಖರೀದಿಸುವ ಯೋಚನೆ ಮಾಡಿದ್ದರೆ ಅಮೆಜಾನ್‌ನತ್ತ ಗಮನಿಸಿ. ಹೌದು, ಪ್ರಸ್ತುತ Amazon ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಒನ್‌ಪ್ಲಸ್‌ ಸಂಸ್ಥೆಯ OnePlus 13R ಮೊಬೈಲ್‌ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಒನ್‌ಪ್ಲಸ್‌ ಸಂಸ್ಥೆಯ ಈ ಮೊಬೈಲ್‌ Snapdragon 8 Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ QHD+ LTPO 3K ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್‌ 13R ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಹೊಸ ಐಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಈ ಜನಪ್ರಿಯ iPhone ಈಗ ಆಫರ್‌ನಲ್ಲಿ ಲಭ್ಯ

OnePlus 13R ಫೋನ್‌ ಬೆಲೆಯಲ್ಲಿ ಆಕರ್ಷಕ ಕಡಿತ

ಒನ್‌ಪ್ಲಸ್‌ 13R ಮೊಬೈಲ್‌ ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಭಾರೀ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆ 44,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 41,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ Nebula Noir ಹಾಗೂ Astral Trail ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್‌ ಇ ಕಾಮರ್ಸ್‌ ತಾಣದ ಮೂಲಕ ಖರೀದಿಸಬಹುದಾಗಿದೆ.

OnePlus 13R

ಒನ್‌ಪ್ಲಸ್‌ 13R ಮೊಬೈಲ್‌ನ ಫೀಚರ್ಸ್‌

ಒನ್‌ಪ್ಲಸ್‌ 13R ಮೊಬೈಲ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.82 ಇಂಚಿನ QHD+ LTPO 3K ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 4,500 ನಿಟ್ಸ್‌ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 1080 x 2424 ಪಿಕ್ಸೆಲ್‌ಗಳ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಈ ಮೊಬೈಲ್‌ Snapdragon 8 Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ.

ಹಾಗೆಯೇ ಒನ್‌ಪ್ಲಸ್‌ 13R ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾವು 50MP ಹಾಗೂ ತೃತೀಯ ಕ್ಯಾಮೆರಾ ಸಹ 50MP ಸೆನ್ಸಾರ್‌ ಆಗಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 16MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ 6,000 mAh ಬ್ಯಾಟರಿ ಸೌಲಭ್ಯ ಪಡೆದಿರುವ ಜೊತೆಗೆ 80W ವೇಗದ ಚಾರ್ಜಿಂಗ್ ಬೆಂಬಲ ಹೊಂದಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo