ನೂತನ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಿಗೆ ಅಮೆಜಾನ್ ಆಯೋಜಿಸಿರುವ Amazon Great Summer Sale ಅತ್ಯುತ್ತಮ ಪ್ಲಾಟ್‌ಫಾರ್ಮ್ ಆಗಿದೆ. ಈ ಮಾರಾದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಭಾರೀ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಒನ್‌ಪ್ಲಸ್ ಕಂಪನಿಯ OnePlus 13s ಮೊಬೈಲ್ ಸಹ ಬೊಂಬಾಟ್ ಬೆಲೆ ಇಳಿಕೆಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಮೂರು ಬಣ್ಣಗಳ ಆಯ್ಕೆಯಲ್ಲಿ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್ 13s ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಇಂದಿನಿಂದ OnePlus Nord CE 6 Lite ಮೊಬೈಲ್ ಖರೀದಿಗೆ ಲಭ್ಯ! ಫೀಚರ್ಸ್ ಗಮನಿಸಿ
ಒನ್‌ಪ್ಲಸ್ 13s ಮೊಬೈಲ್ ಸ್ಟೈಲಿಶ್ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಸದ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭಾರೀ ರಿಯಾಯಿತಿ ಪಡೆದಿದೆ. ಈ ಮೊಬೈಲ್ 12GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 57,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 49,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಫೋನ್ ಗ್ರೀನ್ ಸಿಲ್ಕ್, ಪಿಂಕ್ ಸ್ಯಾಟಿನ್ ಮತ್ತು ಬ್ಲ್ಯಾಕ್ ವೆಲ್ವೆಟ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಬಹುದಾಗಿದೆ. ಈ ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಒನ್‌ಪ್ಲಸ್ 13s ಮೊಬೈಲ್ ಡಿಸ್‌ಪ್ಲೇಯು 6.32 ಇಂಚಿನ ಪೂರ್ಣ ಹೆಚ್‌ಡಿ ProXDR LTPO AMOLED ಮಾದರಿಯಲ್ಲಿ ಇದ್ದು ಕಂಪ್ಯಾಕ್ಟ್ ರಚನೆ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು 2640×1216 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಇನ್ನು ಈ ಮೊಬೈಲ್ Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 15 ಬೆಂಬಲಿತ Oxygren OS 15 ಸಪೋರ್ಟ್ ಇದೆ. ಈ ಫೋನ್ 12GB RAM + 256GB ಮತ್ತು 12GB RAM + 512GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ.
ಅಲ್ಲದೇ ಒನ್‌ಪ್ಲಸ್ 13s ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು, ದ್ವಿತೀಯ ಕ್ಯಾಮೆರಾವು ಸಹ 50MP ಅಲ್ಟ್ರಾ ವೈಡ್ ಸೆನ್ಸಾರ್ ಹೊಂದಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಕೂಡಾ ಈ ಮೊಬೈಲ್ 32MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇನ್ನು ಈ ಫೋನ್ 5,850mAh ಬ್ಯಾಟರಿ ಜೊತೆಗೆ ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ.
Disclosure: This Article Contains Affiliate Links