12GB RAM ಇರುವ OnePlus 13s ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರೀ ಇಳಿಕೆ
ಅಮೆಜಾನ್‌ನಲ್ಲಿ ಒನ್‌ಪ್ಲಸ್ 13s ಮೊಬೈಲ್ ಸಖತ್ ಡಿಸ್ಕೌಂಟ್ ಬೆಲೆಗೆ ಲಭ್ಯ
ಒನ್‌ಪ್ಲಸ್ 13s ಮೊಬೈಲ್ ಡ್ಯುಯಲ್ 50MP ಕ್ಯಾಮೆರಾ ಸೌಲಭ್ಯ ಪಡೆದುಕೊಂಡಿದೆ
ಒನ್‌ಪ್ಲಸ್ 13s ಸ್ಮಾರ್ಟ್‌ಫೋನ್ 80W SUPERVOOC ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ
ಹೊಸದಾಗಿ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್ ಖರೀದಿ ಮಾಡುವ ಪ್ಲಾನ್ ಮಾಡಿರುವ ಗ್ರಾಹಕರೇ ಅಮೆಜಾನ್ ಪ್ಲಾಟ್‌ಫಾರ್ಮ್‌ನತ್ತ ಗಮನಿಸಿ. ಜನಪ್ರಿಯ ಇ ಕಾಮರ್ಸ್ ವೆಬ್‌ಸೈಟ್ ಎನಿಸಿರುವ ಅಮೆಜಾನ್ ತಾಣದಲ್ಲಿ ಇದೀಗ OnePlus 13s ಸ್ಮಾರ್ಟ್‌ಫೋನ್ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದಲ್ಲದೇ ಗ್ರಾಹಕರು ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಮತ್ತಷ್ಟು ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಒನ್‌ಪ್ಲಸ್ 13s ಮೊಬೈಲ್ Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ ಹಾಗೂ 5,850mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದೆ. ಇದರೊಂದಿಗೆ AMOLED ಡಿಸ್‌ಪ್ಲೇ ಅನ್ನು ಸಹ ಒಳಗೊಂಡಿದೆ. ಹಾಗಾದರೆ ಅಮೆಜಾನ್ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್ 13s ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
SurveyAlso Read : Jio Telecom: ಬಜೆಟ್ ಬೆಲೆಗೆ ಲಭ್ಯವಿರುವ 84 ದಿನಗಳ ವ್ಯಾಲಿಡಿಟಿಯ ಪ್ಲಾನ್‌ಗಳ ಲಿಸ್ಟ್ ಇಲ್ಲಿದೆ
OnePlus 13s ಮೊಬೈಲ್ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ
ಒನ್‌ಪ್ಲಸ್ ಕಂಪನಿಯ ಒನ್‌ಪ್ಲಸ್ 13s ಸ್ಮಾರ್ಟ್‌ಫೋನ್ ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ವಾವ್ ಎನಿಸುವ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB + 256GB ವೇರಿಯಂಟ್ ಬೆಲೆ 57,999 ರೂಗಳು ಪ್ರೈಸ್‌ಟ್ಯಾಗ್ ಹೊಂದಿದೆ. ಆದರೆ ಪ್ರಸ್ತುತ ಈ ಮೊಬೈಲ್ ಅನ್ನು ಗ್ರಾಹಕರು 50,997 ರೂಗಳ ಬೆಲೆಯಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಆಸಕ್ತ ಗ್ರಾಹಕರು ಲಭ್ಯ ಇರುವ ಆಯ್ದ ಬ್ಯಾಂಕ್‌ಗಳ ಕೊಡುಗೆ ಪಡೆದುಕೊಂಡರೆ ಮತ್ತಷ್ಟು ರಿಯಾಯಿತಿ ಪಡೆಯಬಹುದು. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಸಹ ಲಭ್ಯ ಇವೆ. ಅಂದಹಾಗೆ ಈ ಫೋನ್ ಗ್ರೀನ್ ಸಿಲ್ಕ್, ಪಿಂಕ್ ಸ್ಯಾಟಿನ್ ಮತ್ತು ಬ್ಲ್ಯಾಕ್ ವೆಲ್ವೆಟ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಒನ್‌ಪ್ಲಸ್ 13s ಸ್ಮಾರ್ಟ್‌ಫೋನ್ ಫೀಚರ್ಸ್
ಒನ್‌ಪ್ಲಸ್ 13s ಸ್ಮಾರ್ಟ್‌ಫೋನ್ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.32 ಇಂಚಿನ ಪೂರ್ಣ ಹೆಚ್‌ಡಿ ProXDR LTPO AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರೊಂದಿಗೆ 2640 × 1216 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ Snapdragon 8 Elite ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 12GB RAM + 256GB ಮತ್ತು 12GB RAM + 512GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ Android 15 ಜೊತೆಗೆ OxygenOS ಬೆಂಬಲ ಪಡೆದುಕೊಂಡಿದೆ.
ಹಾಗೆಯೇ ಒನ್‌ಪ್ಲಸ್ 13s ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿದ್ದು ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾ ಸಹ 50MP ಸೆನ್ಸಾರ್ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಫೋನ್ 5,850mAh ಬ್ಯಾಟರಿ ಜೊತೆಗೆ 80W SUPERVOOC ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile