OnePlus ಕಂಪನಿಯ ಈ ಪ್ರೀಮಿಯಂ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಭಾರೀ ರಿಯಾಯಿತಿ!

HIGHLIGHTS

ಅಮೆಜಾನ್‌ನಲ್ಲಿ ಒನ್‌ಪ್ಲಸ್‌ 15R ಫೋನ್‌ಗೆ ಅತ್ಯುತ್ತಮ ಡಿಸ್ಕೌಂಟ್‌

ಒನ್‌ಪ್ಲಸ್‌ 15R ಮೊಬೈಲ್‌ 7,400mAh ಬ್ಯಾಟರಿ ಸಪೋರ್ಟ್ ಪಡೆದಿದೆ

ಒನ್‌ಪ್ಲಸ್‌ನ ಈ ಫೋನ್‌ ಸ್ನಾಪ್‌ಡ್ರಾಗನ್ 8 ಜೆನ್ 5 ಪ್ರೊಸೆಸರ್‌ ಹೊಂದಿದೆ

OnePlus ಕಂಪನಿಯ ಈ ಪ್ರೀಮಿಯಂ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಭಾರೀ ರಿಯಾಯಿತಿ!

ಒನ್‌ಪ್ಲಸ್‌ ಕಂಪನಿಯ ಪ್ರಿಮಿಯಂ ಮೊಬೈಲ್‌ಗಳ ಪೈಕಿ ಒಂದಾದ OnePlus 15R ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್‌ 7,400mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ವೈಲೇಟ್, ಮಿಂಟ್ ಬ್ರೀಜ್ ಮತ್ತು ಬ್ಲ್ಯಾಕ್ ಕಲರ್‌ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್‌ 15R ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ iQOO Z11xa 5G ಸ್ಮಾರ್ಟ್‌ಫೋನ್‌! ಬೆಲೆ ಹಾಗೂ ಫೀಚರ್ಸ್‌

OnePlus 15R ಬೆಲೆಯಲ್ಲಿ ಸಖತ್ ಡಿಸ್ಕೌಂಟ್‌

ಆಕರ್ಷಕ ಫೀಚರ್ಸ್‌ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಒನ್‌ಪ್ಲಸ್‌ 15R ಮೊಬೈಲ್‌ ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 61,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 59,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್‌ ವೈಲೇಟ್, ಮಿಂಟ್ ಬ್ರೀಜ್ ಮತ್ತು ಬ್ಲ್ಯಾಕ್ ಕಲರ್‌ ಆಯ್ಕೆ ಹೊಂದಿದೆ.

OnePlus 15R

ಒನ್‌ಪ್ಲಸ್‌ 15R ಮೊಬೈಲ್‌ ಫೀಚರ್ಸ್‌ ಹೀಗಿವೆ

ಒನ್‌ಪ್ಲಸ್‌ 15R ಮೊಬೈಲ್‌ 165Hz ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 2800 x 1272 ಪಿಕ್ಸಲ್‌ ರೆಸಲ್ಯೂಶನ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ Android 16 ಸಪೋರ್ಟ್‌ ಒಳಗೊಂಡಿದೆ. ಅಲ್ಲದೇ ಇದು 12GB + 256 GB ಹಾಗೂ 12GB + 512 GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ ಒನ್‌ಪ್ಲಸ್‌ 15R ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಅಲ್ಟ್ರಾ ವೈಡ್‌ ಸೆನ್ಸಾರ್‌ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 32MP ಕ್ಯಾಮೆರಾವನ್ನು ಒಳಗೊಂಡಿದೆ. 4K 120fps ವಿಡಿಯೋ ಸಪೋರ್ಟ್‌ ಸಹ ಇದೆ. ಅಲ್ಲದೇ ನೀರು ಹಾಗೂ ಧೂಳು ನಿರೋಧಕತೆಗಾಗಿ IP68/69 ರೇಟಿಂಗ್‌ ಸೌಲಭ್ಯ ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್‌ 7,400mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 80W SUPERVOOC ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile