ಒನ್‌ಪ್ಲಸ್ ಕಂಪನಿಯ ಪ್ರಿಮಿಯಂ ಮೊಬೈಲ್‌ಗಳ ಪೈಕಿ ಒಂದಾದ OnePlus 15R ಸ್ಮಾರ್ಟ್‌ಫೋನ್ ಇದೀಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್ 7,400mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ವೈಲೇಟ್, ಮಿಂಟ್ ಬ್ರೀಜ್ ಮತ್ತು ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್ 15R ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ iQOO Z11xa 5G ಸ್ಮಾರ್ಟ್‌ಫೋನ್! ಬೆಲೆ ಹಾಗೂ ಫೀಚರ್ಸ್
ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಒನ್‌ಪ್ಲಸ್ 15R ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 61,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 59,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್ ವೈಲೇಟ್, ಮಿಂಟ್ ಬ್ರೀಜ್ ಮತ್ತು ಬ್ಲ್ಯಾಕ್ ಕಲರ್ ಆಯ್ಕೆ ಹೊಂದಿದೆ.
ಒನ್‌ಪ್ಲಸ್ 15R ಮೊಬೈಲ್ 165Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 2800 x 1272 ಪಿಕ್ಸಲ್ ರೆಸಲ್ಯೂಶನ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ Android 16 ಸಪೋರ್ಟ್ ಒಳಗೊಂಡಿದೆ. ಅಲ್ಲದೇ ಇದು 12GB + 256 GB ಹಾಗೂ 12GB + 512 GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ಒನ್‌ಪ್ಲಸ್ 15R ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಅಲ್ಟ್ರಾ ವೈಡ್ ಸೆನ್ಸಾರ್ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದೆ. 4K 120fps ವಿಡಿಯೋ ಸಪೋರ್ಟ್ ಸಹ ಇದೆ. ಅಲ್ಲದೇ ನೀರು ಹಾಗೂ ಧೂಳು ನಿರೋಧಕತೆಗಾಗಿ IP68/69 ರೇಟಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್ 7,400mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W SUPERVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.