12GB RAM ಇರುವ OnePlus 15R ಸ್ಮಾರ್ಟ್‌ಫೋನ್ ಖರೀದಿಸಲು ಇದುವೇ ಅತ್ಯುತ್ತಮ ಸಮಯ!
ಅಮೆಜಾನ್‌ನಲ್ಲಿ ಒನ್‌ಪ್ಲಸ್ 15R ಮೊಬೈಲ್‌ಗೆ ಭರ್ಜರಿ ಆಫರ್
ಒನ್‌ಪ್ಲಸ್ ಸಂಸ್ಥೆಯ ಈ ಮೊಬೈಲ್ 7,400mAh ಬ್ಯಾಟರಿ ಪಡೆದುಕೊಂಡಿದೆ
ಒನ್‌ಪ್ಲಸ್‌ನ ಈ ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 5 ಪ್ರೊಸೆಸರ್ ಹೊಂದಿದೆ
ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ Amazon Great Freedom Sale 2026 ಮಾರಾಟದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ರಿಯಾಯಿತಿ ಪಡೆದಿವೆ. ಅವುಗಳ ಪೈಕಿ ಪ್ರೀಮಿಯಂ ವಿಭಾಗದ OnePlus 15R ಮೊಬೈಲ್ ಸಹ ಬೊಂಬಾಟ್ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಇದಷ್ಟೇ ಅಲ್ಲದೆ ಕೆಲವು ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೂಲಕ ಇನ್‌ಸ್ಟಂಟ್ ರಿಯಾಯಿತಿ, ಎಕ್ಸ್‌ಚೇಂಜ್ ಕೊಡುಗೆ, ನೋ-ಕಾಸ್ಟ್ EMI ಹಾಗೂ ಕ್ಯಾಶ್‌ಬ್ಯಾಕ್ ಸೌಲಭ್ಯಗಳನ್ನೂ ಗ್ರಾಹಕರು ಪಡೆಯಬಹುದು. ಅಂದಹಾಗೆ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದುಕೊಂಡಿರುವ ಜೊತೆಗೆ 7,400mAh ಬ್ಯಾಟರಿ ಸೌಲಭ್ಯ ಹೊಂದಿದೆ. ಹಾಗಾದರೆ ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ನಲ್ಲಿ ಒನ್‌ಪ್ಲಸ್ 15R ಮೊಬೈಲ್‌ಗೆ ಲಭ್ಯ ಇರುವ ಆಫರ್ ಹಾಗೂ ಫೋನಿನ ಫೀಚರ್ಸ್ ಮುಂದೆ ತಿಳಿಯೋಣ.
SurveyAlso Read : ವೇಗದ ಪ್ರೊಸೆಸರ್ ಇರುವ Redmi Turbo 5 ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ!
OnePlus 15R ಬೆಲೆಯಲ್ಲಿ ಭಾರೀ ಡಿಸ್ಕೌಂಟ್
ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಮೊಬೈಲ್ ಕಂಪನಿಯ ಒನ್‌ಪ್ಲಸ್ 15R ಮೊಬೈಲ್ ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ ಸೇಲ್‌ನಲ್ಲಿ ಗಮನಾರ್ಹ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 61,000 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 59,998 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್ ವೈಲೇಟ್, ಮಿಂಟ್ ಬ್ರೀಜ್ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಈ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ಒನ್‌ಪ್ಲಸ್ 15R ಮೊಬೈಲ್ ಫೀಚರ್ಸ್ ಹೀಗಿವೆ
ಒನ್‌ಪ್ಲಸ್ 15R ಮೊಬೈಲ್ 165Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 2800 x 1272 ಪಿಕ್ಸಲ್ ರೆಸಲ್ಯೂಶನ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ Android 16 ಸಪೋರ್ಟ್ ಒಳಗೊಂಡಿದೆ. ಅಲ್ಲದೇ ಇದು 12GB + 256 GB ಹಾಗೂ 12GB + 512 GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಇನ್ನು ಒನ್‌ಪ್ಲಸ್ 15R ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಅಲ್ಟ್ರಾ ವೈಡ್ ಸೆನ್ಸಾರ್ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದೆ. 4K 120fps ವಿಡಿಯೋ ಸಪೋರ್ಟ್ ಸಹ ಇದೆ. ಅಲ್ಲದೇ ನೀರು ಹಾಗೂ ಧೂಳು ನಿರೋಧಕತೆಗಾಗಿ IP68/69 ರೇಟಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್ 7,400mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W SUPERVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
Disclosure: This Article Contains Affiliate Links
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
