ಪ್ರಮುಖ ಮೊಬೈಲ್ ಬ್ರಾಂಡ್‌ಗಳಲ್ಲಿ ಒಂದಾದ OnePlus ತನ್ನ ಕೆಲವು ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಆ ಪೈಕಿ OnePlus 15R ಮೊಬೈಲ್ ಸಹ ಪ್ರಿಮಿಯಂ ವಿಭಾಗದಲ್ಲಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಈ ಸ್ಮಾರ್ಟ್‌ಫೋನ್ Amazon ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದಿದ್ದು ಮೊಬೈಲ್ ಪ್ರಿಯರು ಹುಬ್ಬೇರಿಸುವಂತೆ ಆಗಿದೆ. ಅಲ್ಲದೇ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಮೂಲಕ ಹೆಚ್ಚುವರಿ ರಿಯಾಯಿತಿ ಕೂಡಾ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್ Snapdragon 8 Gen 5 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. Amazon ಇ ಕಾಮರ್ಸ್ ತಾಣದಲ್ಲಿ ಒನ್‌ಪ್ಲಸ್ 15R ಫೋನಿಗೆ ಲಭ್ಯ ಇರುವ ಆಫರ್ ಬೆಲೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Boat Chrome Iris ಸ್ಮಾರ್ಟ್‌ವಾಚ್ ಬಿಡುಗಡೆ! ಬಿಗ್ ಬ್ಯಾಟರಿ ಸೌಲಭ್ಯ ಇರುವ ಈ ವಾಚ್ ಬೆಲೆ ಎಷ್ಟು?
ಒನ್‌ಪ್ಲಸ್ 15R ಮೊಬೈಲ್ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡಿದೆ. Amazon ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಈ ಮೊಬೈಲ್‌ನ 12GB + 256GB ವೇರಿಯಂಟ್ 54,999 ರೂಗಳ ಪ್ರೈಸ್‌ಟ್ಯಾಗ್ ಪಡೆದಿದ್ದು, ಆದರೆ ಪ್ರಸ್ತುತ ನೇರವಾಗಿ 47,999 ರೂಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಸಕ್ತ ಖರೀದಿದಾರರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಬಹುದು. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಭಿನ್ನ EMI ಆಯ್ಕೆಗಳನ್ನು ಪಡೆಯಬಹುದು. ಇನ್ನು ಈ ಫೋನ್ ಚಾರ್ಕೋಲ್ ಬ್ಲ್ಯಾಕ್, ಎಲೆಕ್ಟ್ರಿಕ್ ವೈಲೆಟ್ ಹಾಗೂ ಮಿಂಟ್ ಬ್ರಿಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ಒನ್‌ಪ್ಲಸ್ 15R ಸ್ಮಾರ್ಟ್‌ಫೋನ್ 165Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 2800 x 1272 ಪಿಕ್ಸಲ್ ರೆಸಲ್ಯೂಶನ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ Snapdragon 8 Gen 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ Android 16 ಸಪೋರ್ಟ್ ಒಳಗೊಂಡಿದೆ. ಅಲ್ಲದೇ ಇದು 12GB + 256GB ಹಾಗೂ 12GB + 512GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಇನ್ನು ಒನ್‌ಪ್ಲಸ್ 15R ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಈ ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಅಲ್ಟ್ರಾ ವೈಡ್ ಸೆನ್ಸಾರ್ ಸೆಕೆಂಡರಿ ಕ್ಯಾಮೆರಾ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 32MP ಕ್ಯಾಮೆರಾವನ್ನು ಒಳಗೊಂಡಿದೆ. 4K 120fps ವಿಡಿಯೋ ಸಪೋರ್ಟ್ ಸಹ ಇದೆ. ಅಲ್ಲದೇ ನೀರು ಹಾಗೂ ಧೂಳು ನಿರೋಧಕತೆಗಾಗಿ IP68/69 ರೇಟಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್ 7400mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W SUPERVOOC ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.