ಬಹುನಿರೀಕ್ಷಿತ OnePlus N6 ಸ್ಮಾರ್ಟ್‌ಫೋನ್ ಇಂದು ಬಿಡುಗಡೆ! ನಿರೀಕ್ಷಿತ ಬೆಲೆ ಹಾಗೂ ಫೀಚರ್ಸ್
ಇಂದು (ಜೂನ್ 30 ರಂದು) ಒನ್‌ಪ್ಲಸ್ N6 ಫೋನ್ ಲಾಂಚ್
ಒನ್‌ಪ್ಲಸ್ N6 ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿರಲಿದೆ
ಒನ್‌ಪ್ಲಸ್‌ನ ಈ ಫೋನ್ 8,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿರಲಿದೆ
ಲೀಡಿಂಗ್ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾಗಿರುವ ಒನ್‌ಪ್ಲಸ್ ಸಂಸ್ಥೆಯು ತನ್ನ ಹೊಸ OnePlus N6 ಮೊಬೈಲ್ ಅನ್ನು ಇಂದು (ಜೂನ್ 30 ರಂದು) ದೇಶೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಮುಂಬರುವ ಈ ಮೊಬೈಲ್ ಲಾಂಚ್ ಕುರಿತಾಗಿ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಅಂದಹಾಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವ ನಿರೀಕ್ಷೆಗಳು ಇವೆ. ಅಲ್ಲದೇ ಇದು 50MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆಗಳು ಇವೆ. ಹಾಗಾದರೇ ಒನ್‌ಪ್ಲಸ್ N6 ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
SurveyAlso Read : ಬಜೆಟ್ ಬೆಲೆಯಲ್ಲಿ Samsung Galaxy M47 5G ಮೊಬೈಲ್ ಬಿಡುಗಡೆ; ಟ್ರಿಪಲ್ ಕ್ಯಾಮೆರಾ ಸೌಲಭ್ಯ
ಇಂದು ಎಂಟ್ರಿ ಕೊಡಲಿದೆ OnePlus N6 ಫೋನ್
ಒನ್‌ಪ್ಲಸ್ ಸಂಸ್ಥೆಯ ಮುಂಬರುವ ನೂತನ ಒನ್‌ಪ್ಲಸ್ N6 ಮೊಬೈಲ್ ಬಜೆಟ್ ರೇಂಜ್‌ನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆಗಳು ಇವೆ. ಅಂದಹಾಗೆ ಈ ಮೊಬೈಲ್ ಇಂದು (ಜೂನ್ 30 ರಂದು) ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈ ಮೊಬೈಲ್ ಬಿಡುಗಡೆ ಬಳಿಕ ಅಮೆಜಾನ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್ ಬ್ಲ್ಯಾಕ್ ಮತ್ತು ಲೈಟ್ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ. ಈ ಮೊಬೈಲ್ ಸುಮಾರು 20,000 ರೂ. ಗಳ ಒಳಗೆ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳು ಇವೆ.

ಒನ್‌ಪ್ಲಸ್ N6 ಫೋನ್ ನಿರೀಕ್ಷಿತ ಫೀಚರ್ಸ್
ಮಾರುಕಟ್ಟೆಗೆ ಹೊಸದಾಗಿ ಎಂಟ್ರಿ ಕೊಡಲಿರುವ ಒನ್‌ಪ್ಲಸ್ N6 ಸ್ಮಾರ್ಟ್‌ಫೋನ್ 6.72 ಇಂಚಿನ FHD+ IPS LCD ಡಿಸ್ಪ್ಲೇ ಹೊಂದಿರಲಿದ್ದು, ಇದರೊಂದಿಗೆ ಈ ಡಿಸ್‌ಪ್ಲೇಯು 144Hz ರಿಫ್ರೆಶ್ ರೇಟ್ ಪಡೆದಿರಲಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಇದರೊಂದಿಗೆ ಈ ಫೋನ್ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸಪೋರ್ಟ್ ಒಳಗೊಂಡಿರುವ ಸಾಧ್ಯತೆಗಳು ಅಧಿಕ ಆಗಿವೆ. ಬ್ಯಾಟರಿ ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ ಸುಮಾರು 3 ದಿನಗಳ ಬ್ಯಾಕ್‌ಅಪ್ ಒದಗಿಸಲಿದೆ ಎನ್ನಲಾಗಿದೆ.
ಒನ್‌ಪ್ಲಸ್ N6 ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿರಲಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿರಲಿದೆ. ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸೌಲಭ್ಯದಲ್ಲಿ ಇರಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8MP ಕ್ಯಾಮೆರಾ ರಚನೆ ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
