8,000mAh ಬ್ಯಾಟರಿ ಸೌಲಭ್ಯದ OnePlus ಕಂಪನಿಯ ಈ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

HIGHLIGHTS

ಒನ್‌ಪ್ಲಸ್‌ N6 ಫೋನಿಗೆ ಅಮೆಜಾನ್‌ನಲ್ಲಿ ಗಮನಾರ್ಹ ಕೊಡುಗೆ

ಒನ್‌ಪ್ಲಸ್‌ N6 ಮೊಬೈಲ್‌ 8,000mAh ಬ್ಯಾಟರಿ ಒಳಗೊಂಡಿದೆ

ಒನ್‌ಪ್ಲಸ್‌ N6 ಸ್ಮಾರ್ಟ್‌ಫೋನ್‌ ಎರಡು ಆಕರ್ಷಕ ಕಲರ್‌ನಲ್ಲಿ ಲಭ್ಯ

8,000mAh ಬ್ಯಾಟರಿ ಸೌಲಭ್ಯದ OnePlus ಕಂಪನಿಯ ಈ ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಅಮೆಜಾನ್‌ ತಾಣದಲ್ಲಿ ಚಾಲ್ತಿ ಇರುವ Amazon Great Indian Festival Sale 2026 ಸೇಲ್ ಆನ್‌ಲೈನ್‌ ಶಾಪಿಂಗ್ ಪ್ರಿಯರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದ್ದು, ಆ ಪೈಕಿ OnePlus N6 ಮೊಬೈಲ್‌ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6000 ಚಿಪ್‌ಸೆಟ್‌ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 8,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್‌ N6 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಕಡಿಮೆ ದರದಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಬೇಕಿದ್ರೆ, Jio ಸಂಸ್ಥೆಯ ಈ ಪ್ಲಾನ್‌ ಬೆಸ್ಟ್‌!

OnePlus N6 ಫೋನಿಗೆ ಬೊಂಬಾಟ್ ಡಿಸ್ಕೌಂಟ್

ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒನ್‌ಪ್ಲಸ್‌ N6 ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 4GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 30,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 23,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಮೀಡ್‌ನೈಟ್‌ ಗ್ರೀನ್ ಮತ್ತು ಫ್ರೆಶ್ ಮಿಂಟ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಒನ್‌ಪ್ಲಸ್‌ N6 ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

OnePlus N6 5G launched in India with 8000mAh battery price and specification
OnePlus N6 5G

ಒನ್‌ಪ್ಲಸ್‌ N6 ಫೋನಿನ ಫೀಚರ್ಸ್‌

ಒನ್‌ಪ್ಲಸ್‌ N6 ಮೊಬೈಲ್‌ 6.75 ಇಂಚಿನ HD LCD ಟಚ್‌ಸ್ಕ್ರೀನ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 1,200 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6000 ಸರಣಿಯ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 128GB ಹಾಗೂ 6GB RAM + 128GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ OxygenOS 16 ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ಒನ್‌ಪ್ಲಸ್‌ N6 ಮೊಬೈಲ್‌ 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದ್ದು, 10x ಡಿಜಿಟಲ್ ಜೂಮ್ ಅನ್ನು ನೀಡುತ್ತದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್‌ 1080p/60 fps ವರೆಗೆ ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಪ್ರಮುಖ ಹೈಲೈಟ್‌ಯೆಂದರೆ ಇದು 8,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 45W ಟರ್ಬೊಪವರ್ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile