ಭಾರತದಲ್ಲಿ OnePlus N6 ಮೊಬೈಲ್ ಲಾಂಚ್; ಇದು ಬಜೆಟ್ ಬೆಲೆಯಲ್ಲಿ 8,000mAh ಬ್ಯಾಟರಿ ಫೋನ್
ಒನ್‌ಪ್ಲಸ್ N6 ಮೊಬೈಲ್ 8,000mAh ಬ್ಯಾಟರಿ ಹೊಂದಿದೆ
ಒನ್‌ಪ್ಲಸ್ N6 ಮೊಬೈಲ್ 50MP ರಿಯರ್ ಕ್ಯಾಮೆರಾ ಪಡೆದುಕೊಂಡಿದೆ
ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6000 ಸರಣಿಯ ಪ್ರೊಸೆಸರ್ ಒಳಗೊಂಡಿದೆ
ಒನ್‌ಪ್ಲಸ್ ಕಂಪನಿಯ ಬಹುನಿರೀಕ್ಷಿತ OnePlus N6 ಮೊಬೈಲ್ ಭಾರತದಲ್ಲಿ ಇಂದು (ಜೂನ್ 30 ರಂದು) ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಹೊಸ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6000 ಸರಣಿಯ ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್ ಪಡೆದಿರುವುದು ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಇದು 50MP ಸೆನ್ಸರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಮೊಬೈಲ್ ಫ್ರೆಶ್ ಮಿಂಟ್ ಮತ್ತು ಮಿಡ್‌ನೈಟ್ ಗ್ರೀನ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ಒನ್‌ಪ್ಲಸ್ N6 ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಭಾರತದಲ್ಲಿ Moto Pad 70 Pro ಟ್ಯಾಬ್ ಲಾಂಚ್! 10,200mAh ಬ್ಯಾಟರಿ ಸಪೋರ್ಟ್
OnePlus N6 ಮೊಬೈಲ್ ಬೆಲೆ ಹಾಗೂ ಲಭ್ಯತೆ
ಒನ್‌ಪ್ಲಸ್ ಕಂಪನಿಯ ಒನ್‌ಪ್ಲಸ್ N6 ಮೊಬೈಲ್ ಎರಡು ವೇರಿಯಂಟ್ ಆಯ್ಕೆಗಳಲ್ಲಿ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 4GB RAM + 128GB ಸ್ಟೋರೇಜ್ ವೇರಿಯಂಟ್ 22,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 6GB RAM + 128GB ಸ್ಟೋರೇಜ್ ವೇರಿಯಂಟ್ ಮಾಡೆಲ್ 24,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಬ್ಲೂ ಸರ್ಫ್, ಕಂಟ್ರಿ ಏರ್ ಮತ್ತು ಸಿಲೂಯೆಟ್ ಆಗಿವೆ. ಅಂದಹಾಗೆ ಈ ಮೊಬೈಲ್ ಭಾರತದಲ್ಲಿ ಜುಲೈ 4 ರಂದು ಅಮೆಜಾನ್ ಮೂಲಕ ಮಾರಾಟಕ್ಕೆ ಬರಲಿದೆ.

ಒನ್‌ಪ್ಲಸ್ N6 ಮೊಬೈಲ್ ಫೀಚರ್ಸ್
ಒನ್‌ಪ್ಲಸ್ N6 ಮೊಬೈಲ್ 6.75 ಇಂಚಿನ HD LCD ಟಚ್‌ಸ್ಕ್ರೀನ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,200 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6000 ಸರಣಿಯ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 128GB ಹಾಗೂ 6GB RAM + 128GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ OxygenOS 16 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಒನ್‌ಪ್ಲಸ್ N6 ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದ್ದು, 10x ಡಿಜಿಟಲ್ ಜೂಮ್ ಅನ್ನು ನೀಡುತ್ತದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್ 1080p/60 fps ವರೆಗೆ ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಪ್ರಮುಖ ಹೈಲೈಟ್‌ಯೆಂದರೆ ಇದು 8,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 45W ಟರ್ಬೊಪವರ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
