ಒನ್‌ಪ್ಲಸ್ ಸಂಸ್ಥೆಯ ಮುಂಬರುವ OnePlus N6 ಮೊಬೈಲ್ ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ. ಅಂದಹಾಗೆ ಕಂಪನಿಯು ಈ ಫೋನ್ ಅನ್ನು ಬಜೆಟ್ ವಿಭಾಗದಲ್ಲಿ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗುತ್ತಿದೆ ಎನ್ನಲಾಗಿದೆ. ಒನ್‌ಪ್ಲಸ್ ಸಂಸ್ಥೆಯ ನೂತನ ಒನ್‌ಪ್ಲಸ್ N6 ಮೊಬೈಲ್ ಇದೇ ಜೂನ್ 30 ರಂದು ದೇಶೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಮೊಬೈಲ್ ಲಾಂಚ್ ಕುರಿತಾಗಿ ಈಗಾಗಲೇ ಅಮೆಜಾನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಲೈವ್ ಮಾಡಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವ ನಿರೀಕ್ಷೆಗಳು ಇವೆ. ಅಲ್ಲದೇ ಇದು 50MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆಗಳು ಇವೆ. ಹಾಗಾದರೇ ಒನ್‌ಪ್ಲಸ್ N6 ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
Also Read : 7,000mAh ಬ್ಯಾಟರಿ ಇರುವ POCO M7 Plus ಮೊಬೈಲ್ ಈಗ ರಿಯಾಯಿತಿ ದರದಲ್ಲಿ ಲಭ್ಯ!
ಒನ್‌ಪ್ಲಸ್ ಕಂಪನಿಯ ಮುಂಬರುವ ಹೊಸ ಒನ್‌ಪ್ಲಸ್ N6 ಸ್ಮಾರ್ಟ್‌ಫೋನ್ ಗ್ರಾಹಕರ ಸ್ನೇಹಿ ಬೆಲೆಯಲ್ಲಿ ಮಾರುಕಟ್ಟೆಗೆ ಪ್ರವೇಶಿಸುವ ಸಾಧ್ಯತೆಗಳು ಇವೆ. ಅಂದಹಾಗೆ ಈ ಮೊಬೈಲ್ ಇದೇ ಜೂನ್ 30 ರಂದು ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈ ಮೊಬೈಲ್ ಲಾಂಚ್ ಬಳಿಕ ಅಮೆಜಾನ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್ ಬ್ಲ್ಯಾಕ್ ಮತ್ತು ಲೈಟ್ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ. ಈ ಫೋನ್ ಸುಮಾರು 20,000 ರೂ. ಗಳ ಒಳಗೆ ಮಾರುಕಟ್ಟೆ ಪ್ರವೇಶಿಸುವ ನಿರೀಕ್ಷೆಗಳು ಇವೆ.
ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಡಲಿರುವ ಒನ್‌ಪ್ಲಸ್ N6 ಸ್ಮಾರ್ಟ್‌ಫೋನ್ 6.72 ಇಂಚಿನ FHD+ IPS LCD ಡಿಸ್‌ಪ್ಲೇ ಹೊಂದಿರಲಿದ್ದು, ಇದರೊಂದಿಗೆ ಈ ಡಿಸ್‌ಪ್ಲೇಯು 144Hz ರಿಫ್ರೆಶ್ ರೇಟ್ ಪಡೆದಿರಲಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಇದರೊಂದಿಗೆ ಈ ಫೋನ್ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸಪೋರ್ಟ್ ಒಳಗೊಂಡಿರುವ ಸಾಧ್ಯತೆಗಳು ಅಧಿಕ ಆಗಿವೆ. ಬ್ಯಾಟರಿ ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ ಸುಮಾರು 3 ದಿನಗಳ ಬ್ಯಾಕ್‌ಅಪ್ ಒದಗಿಸಲಿದೆ ಎನ್ನಲಾಗಿದೆ.
ಒನ್‌ಪ್ಲಸ್ N6 ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿರಲಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿರಲಿದೆ. ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸೌಲಭ್ಯದಲ್ಲಿ ಇರಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಸ್ಮಾರ್ಟ್‌ಫೋನ್ 8MP ಕ್ಯಾಮೆರಾ ರಚನೆ ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.