OnePlus N6 Lite india launch announced
ಒನ್‌ಪ್ಲಸ್ ಮೊಬೈಲ್ ಕಂಪನಿಯು ತನ್ನ N6 ಸರಣಿಯಲ್ಲಿ ಇದೀಗ OnePlus N6 Lite ಮೊಬೈಲ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಮೊಬೈಲ್ ಇಂದು (ಸಪ್ಟಂಬರ್ 22 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಎಂಟ್ರಿ ಕೊಡಲಿದೆ. ಈ ಮೊಬೈಲ್ ಬಿಡುಗಡೆ ಕುರಿತು ಈಗಾಗಲೇ ಅಮೆಜಾನ್ ಇ ಕಾಮರ್ಸ್‌ನಲ್ಲಿ ಮೈಕ್ರೋಪೇಜ್ ಸಹ ತೆರೆಯಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ MIL-STD-810H ಮಿಲಿಟರಿ-ದರ್ಜೆಯ ಬಾಳಿಕೆಯನ್ನು ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ 7,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವ ಬಹುತೇಕ ಪಕ್ಕಾ ಆಗಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆಗಳು ಇವೆ. ಹಾಗಾದರೆ ಒನ್‌ಪ್ಲಸ್ N6 ಲೈಟ್ ಮೊಬೈಲ್‌ನ ಲಾಂಚ್ ಮಾಹಿತಿ, ನಿರೀಕ್ಷಿತ ಬೆಲೆ, ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vi ಟೆಲಿಕಾಂನ 625 ರೂ.ಗಳ ಪ್ಲಾನ್‌ನಲ್ಲಿ ಜಬರ್ದಸ್ತ್ ಡೇಟಾ ಜೊತೆಗೆ 60 ದಿನಗಳ ವ್ಯಾಲಿಡಿಟಿ
ಒನ್‌ಪ್ಲಸ್ ಕಂಪನಿಯು ತನ್ನ ಹೊಸ ಒನ್‌ಪ್ಲಸ್ N6 ಲೈಟ್ ಮೊಬೈಲ್ ಅನ್ನು ಭಾರತದಲ್ಲಿ ಅಧಿಕೃತವಾಗಿ ಲಾಂಚ್ ಮಾಡಲು ಸಜ್ಜಾಗಿದೆ. ಅಂದಹಾಗೆ ಈ ಮೊಬೈಲ್ ಇಂದು (ಸಪ್ಟಂಬರ್ 22 ರಂದು) ಮಧ್ಯಾಹ್ನ 12 ಗಂಟೆಗೆ ಲಾಂಚ್ ಮಾಡಲಿದೆ. ಈ ಮೊಬೈಲ್ ಲಾಂಚ್ ಬಳಿಕ ಅಮೆಜಾನ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್ Midnight Hype ಮತ್ತು Neo Green ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ.
ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಡಲಿರುವ ಒನ್‌ಪ್ಲಸ್ N6 ಲೈಟ್ ಸ್ಮಾರ್ಟ್‌ಫೋನ್ 6.75 ಇಂಚಿನ ಫ್ಲಾಟ್ ಡಿಸ್‌ಪ್ಲೇ ಡಿಸ್‌ಪ್ಲೇ ಹೊಂದಿರಲಿದ್ದು, ಇದರೊಂದಿಗೆ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಪಡೆದಿರಲಿದೆ. ಹಾಗೆಯೇ ಇದು MIL-STD-810H ಮಿಲಿಟರಿ-ದರ್ಜೆಯ ಬಾಳಿಕೆಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್ 7,000mAh ಬ್ಯಾಟರಿಯನ್ನು ಪಡೆದಿರಲಿದೆ. ಒಮ್ಮೆ ಚಾರ್ಜ್ ಮಾಡಿದರೆ ಮೂರು ದಿನಗಳ ವರೆಗೆ ಬ್ಯಾಟರಿ ಬ್ಯಾಕ್‌ಅಪ್ ಬರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.
ಒನ್‌ಪ್ಲಸ್ N6 ಲೈಟ್ ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿರಲಿದೆ. ಈ ಮೊಬೈಲ್ ಎರಡು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರಲಿದೆ. ಇದು AI Clear Face ಮತ್ತು AI Eraser ನಂತಹ ಅನೇಕ AI-ಚಾಲಿತ ಫೀಚರ್ಸ್‌ಗಳೊಂದಿಗೆ ಬರಲಿದೆ. ಈ ಫೋನ್ ಮಿಲಿಟರಿ-ದರ್ಜೆಯ ಬಾಳಿಕೆಯನ್ನು (durability) ಹೊಂದಿರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಆದಾಗ್ಯೂ, ಇದರ ಚಿಪ್‌ಸೆಟ್ ಮತ್ತು ಕ್ಯಾಮೆರಾ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ.