OnePlus N6 Lite launch in India on September 22 battery design and other specs revealed
ಒನ್‌ಪ್ಲಸ್ ಸಂಸ್ಥೆಯ ಮುಂಬರುವ OnePlus N6 Lite ಮೊಬೈಲ್ ಬಿಡುಗಡೆಗೂ ಮುನ್ನವೇ ಸದ್ದು ಮಾಡುತ್ತಿದೆ. ಅಂದಹಾಗೆ ಕಂಪನಿಯ ಹೊಸ ಒನ್‌ಪ್ಲಸ್ N6 ಲೈಟ್ ಮೊಬೈಲ್ ಇದೇ ಸೆಪ್ಟೆಂಬರ್ 22 ರಂದು ದೇಶೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಮೊಬೈಲ್ ಲಾಂಚ್ ಕುರಿತಾಗಿ ಈಗಾಗಲೇ ಅಮೆಜಾನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಲೈವ್ ಮಾಡಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ MIL-STD-810H ಮಿಲಿಟರಿ-ದರ್ಜೆಯ ಬಾಳಿಕೆಯನ್ನು ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ 7,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವ ಬಹುತೇಕ ಪಕ್ಕಾ ಆಗಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆಗಳು ಇವೆ. ಹಾಗಾದರೇ ಒನ್‌ಪ್ಲಸ್ N6 ಲೈಟ್ ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
Also Read : 7,000mAh ಬ್ಯಾಟರಿ ಸೌಲಭ್ಯ ಇರುವ Moto G37 Power ಮೊಬೈಲ್ ಬೆಲೆಯಲ್ಲಿ ಇದೀಗ ಭಾರೀ ಇಳಿಕೆ!
ಒನ್‌ಪ್ಲಸ್ ಕಂಪನಿಯ ಮುಂಬರುವ ಹೊಸ ಒನ್‌ಪ್ಲಸ್ N6 ಲೈಟ್ ಸ್ಮಾರ್ಟ್‌ಫೋನ್ ಗ್ರಾಹಕರ ಸ್ನೇಹಿ ಬೆಲೆಯಲ್ಲಿ ಮಾರುಕಟ್ಟೆಗೆ ಪ್ರವೇಶಿಸುವ ಸಾಧ್ಯತೆಗಳು ಇವೆ. ಅಂದಹಾಗೆ ಈ ಮೊಬೈಲ್ ಇದೇ ಸೆಪ್ಟೆಂಬರ್ 22 ರಂದು ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಈ ಮೊಬೈಲ್ ಲಾಂಚ್ ಬಳಿಕ ಅಮೆಜಾನ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್ Midnight Hype ಮತ್ತು Neo Green ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ.
ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಡಲಿರುವ ಒನ್‌ಪ್ಲಸ್ N6 ಲೈಟ್ ಸ್ಮಾರ್ಟ್‌ಫೋನ್ 6.75 ಇಂಚಿನ ಫ್ಲಾಟ್ ಡಿಸ್‌ಪ್ಲೇ ಡಿಸ್‌ಪ್ಲೇ ಹೊಂದಿರಲಿದ್ದು, ಇದರೊಂದಿಗೆ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಪಡೆದಿರಲಿದೆ. ಹಾಗೆಯೇ ಇದು MIL-STD-810H ಮಿಲಿಟರಿ-ದರ್ಜೆಯ ಬಾಳಿಕೆಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್ 7,000mAh ಬ್ಯಾಟರಿಯನ್ನು ಪಡೆದಿರಲಿದೆ. ಒಮ್ಮೆ ಚಾರ್ಜ್ ಮಾಡಿದರೆ ಮೂರು ದಿನಗಳ ವರೆಗೆ ಬ್ಯಾಟರಿ ಬ್ಯಾಕ್‌ಅಪ್ ಬರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.
ಒನ್‌ಪ್ಲಸ್ N6 ಲೈಟ್ ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿರಲಿದೆ. ಈ ಮೊಬೈಲ್ ಎರಡು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರಲಿದೆ. ಇದು AI Clear Face ಮತ್ತು AI Eraser ನಂತಹ ಅನೇಕ AI-ಚಾಲಿತ ಫೀಚರ್ಸ್‌ಗಳೊಂದಿಗೆ ಬರಲಿದೆ. ಈ ಫೋನ್ ಮಿಲಿಟರಿ-ದರ್ಜೆಯ ಬಾಳಿಕೆಯನ್ನು (durability) ಹೊಂದಿರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಆದಾಗ್ಯೂ, ಇದರ ಚಿಪ್‌ಸೆಟ್ ಮತ್ತು ಕ್ಯಾಮೆರಾ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ.