OnePlus N6 5G launched in India with 8000mAh battery price and specification
Amazon ಕಂಪನಿಯ Amazon Great Freedom Festival Sale 2026 ಸೇಲ್ ಇದೇ ಅಕ್ಟೋಬರ್ 8 ರಂದು ಪ್ರಾರಂಭವಾಗಲಿದೆ. ಈ ಮಾರಾಟ ಶುರುವಿಗೂ ಮುನ್ನವೇ ಅಮೆಜಾನ್ ಸ್ಮಾರ್ಟ್‌ಫೋನ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲಿನ ಡೀಲ್‌ಗಳನ್ನು ಬಹಿರಂಗಪಡಿಸಲು ಪ್ರಾರಂಭಿಸಿದೆ. ಇದರಿಂದಾಗಿ ಗ್ರಾಹಕರು ಮುಖ್ಯ ಸೇಲ್ ಪ್ರಾರಂಭವಾಗುವ ಮೊದಲೇ ಕೆಲವು ಡಿವೈಸ್‌ಗಳನ್ನು ಖರೀದಿಸುವ ಅವಕಾಶವನ್ನು ಲಭ್ಯವಾಗಿದೆ. ಈ ಮಾರಾಟದಲ್ಲಿ OnePlus N6 ಮೊಬೈಲ್ ಆಕರ್ಷಕ ಕೊಡುಗೆ ಪಡೆದಿದೆ. ಇದರೊಂದಿಗೆ ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಮೂಲಕ ಖರೀದಿದಾರರು ಹೆಚ್ಚುವರಿ ರಿಯಾಯಿತಿಯನ್ನೂ ಪಡೆಯಬಹುದು. ಹಾಗಾದರೆ ಅಮೆಜಾನ್‌ನಲ್ಲಿ ಈ ಮೊಬೈಲ್‌ಗೆ ಲಭ್ಯವಿರುವ ಕೊಡುಗೆಯ ಬಗ್ಗೆ ಮುಂದೆ ತಿಳಿಯೋಣ.
Also Read : ವಿವೋ ಫೋನ್ ಖರೀದಿಸುವ ಗ್ರಾಹಕರಿಗೆ ಇಲ್ಲಿದೆ ಸಿಹಿಸುದ್ದಿ! Vivo T5X 5G ಬೆಲೆಯಲ್ಲಿ ಭಾರೀ ಇಳಿಕೆ
ಒನ್‌ಪ್ಲಸ್ ಕಂಪನಿಯ ಇತ್ತೀಚಿನ ಒನ್‌ಪ್ಲಸ್ N6 ಸ್ಮಾರ್ಟ್‌ಫೋನ್ ಸದ್ಯದಲ್ಲೇ ಪ್ರಾರಂಭವಾಗಲಿರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2026 ಸೇಲ್‌ನಲ್ಲಿ ಸಖತ್ ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯವಾಗಲಿದೆ. ಅಮೆಜಾನ್‌ನಲ್ಲಿ ಒನ್‌ಪ್ಲಸ್ N6 ಮೊಬೈಲ್‌ನ 4GB+128GB ವೇರಿಯಂಟ್ ಬೆಲೆ 30,999 ರೂ.ಗಳ ಬೆಲೆಯನ್ನು ಹೊಂದಿದೆ. ಆದರೆ ಪ್ರಸ್ತುತ ಇದರ ಬೆಲೆ 24,999 ರೂ.ಗಳು ಎಂದು ಪಟ್ಟಿ ಮಾಡಲಾಗಿದೆ.
ಒನ್‌ಪ್ಲಸ್ N6 ಮೊಬೈಲ್ 6.75 ಇಂಚಿನ HD LCD ಟಚ್‌ಸ್ಕ್ರೀನ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 1,200 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6000 ಸರಣಿಯ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 128GB ಹಾಗೂ 6GB RAM + 128GB ವೇರಿಯಂಟ್‌ಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ Android 16 ಆಧಾರಿತ OxygenOS 16 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ಒನ್‌ಪ್ಲಸ್ N6 ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದ್ದು, 10x ಡಿಜಿಟಲ್ ಜೂಮ್ ಅನ್ನು ನೀಡುತ್ತದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಈ ಮೊಬೈಲ್ 1080p/60 fps ವರೆಗೆ ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಪ್ರಮುಖ ಹೈಲೈಟ್‌ಯೆಂದರೆ ಇದು 8,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 45W ಟರ್ಬೊಪವರ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.