OnePlus Nord 5 ಮೊಬೈಲ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಬೆಲೆಯಲ್ಲಿ ಭಾರೀ ಇಳಿಕೆ

HIGHLIGHTS

ಒನ್‌ಪ್ಲಸ್‌ ನಾರ್ಡ್‌ 5 ಫೋನ್‌ Amazon ಪ್ಲಾಟ್‌ಫಾರ್ಮ್‌ನಲ್ಲಿ ಖರೀದಿಗೆ ಲಭ್ಯ

ಒನ್‌ಪ್ಲಸ್‌ ಕಂಪನಿಯ ಈ ಫೋನ್‌ 6,800mAh ಬ್ಯಾಟರಿ ಪಡೆದುಕೊಂಡಿದೆ

ಈ ಮೊಬೈಲ್‌ ಡ್ರೈ ಐಸ್ ಮತ್ತು ಪ್ಯಾಂಟೋಮ್ ಗ್ರೇ ಕಲರ್‌ ಆಯ್ಕೆ ಹೊಂದಿದೆ

OnePlus Nord 5 ಮೊಬೈಲ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಬೆಲೆಯಲ್ಲಿ ಭಾರೀ ಇಳಿಕೆ

ಜನಪ್ರಿಯ ಒನ್‌ಪ್ಲಸ್‌ ಕಂಪನಿಯ OnePlus Nord 5 ಮೊಬೈಲ್‌ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಒನ್‌ಪ್ಲಸ್‌ ನಾರ್ಡ್‌ 5 ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಒನ್‌ಪ್ಲಸ್‌ ಸಂಸ್ಥೆಯ ಈ ಮೊಬೈಲ್‌ ಕ್ವಾಲ್ಕಮ್‌ Snapdragon 8s Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ 6,800mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್‌ ನಾರ್ಡ್‌ 5 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : WhatsApp ಮೆಸೆಜ್‌ ಮಾಡುವಾಗ ಈ ಸೀಕ್ರೆಟ್ ಫೀಚರ್‌ ಬಳಕೆ ಮಾಡಿದ್ದೀರಾ?

OnePlus Nord 5 ಫೋನ್‌ ಬೆಲೆಯಲ್ಲಿ ಭಾರೀ ಕಡಿತ

ಒನ್‌ಪ್ಲಸ್‌ ನಾರ್ಡ್‌ 5 ಮೊಬೈಲ್‌ ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 8GB + 256GB ವೇರಿಯಂಟ್‌ ಬೆಲೆ 34,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 33,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ ಡ್ರೈ ಐಸ್ ಮತ್ತು ಪ್ಯಾಂಟೋಮ್ ಗ್ರೇ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್‌ ಇ ಕಾಮರ್ಸ್‌ ತಾಣದ ಮೂಲಕ ಖರೀದಿಸಬಹುದಾಗಿದೆ.

OnePlus Nord 5

ಒನ್‌ಪ್ಲಸ್‌ ನಾರ್ಡ್‌ 5 ಮೊಬೈಲ್‌ನ ಫೀಚರ್ಸ್‌ ಮಾಹಿತಿ

ಒನ್‌ಪ್ಲಸ್‌ ನಾರ್ಡ್‌ 5 ಮೊಬೈಲ್‌ ಡಿಸ್‌ಪ್ಲೇಯು 6.83 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 144Hz ರಿಫ್ರೆಶ್‌ ರೇಟ್‌ ಹೊಂದಿದ್ದು ಜೊತೆಗೆ 1800 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಮೊಬೈಲ್‌ ಕ್ವಾಲ್ಕಮ್‌ Snapdragon 8s Gen 3 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಪೊಕೊದ ಈ ಮೊಬೈಲ್‌ 8GB + 256GB ಹಾಗೂ 12GB RAM + 512GB ವೇರಿಯಂಟ್‌ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಲಾಗಿದೆ.

ಹಾಗೆಯೇ ಒನ್‌ಪ್ಲಸ್‌ ನಾರ್ಡ್‌ 5 ಮೊಬೈಲ್‌ ಪ್ರಾಥಮಿಕ ಕ್ಯಾಮೆರಾವು 50MP ಸೋನಿ ಸೆನ್ಸಾರ್‌ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾವೈಡ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 50MP ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಇದ್ದು, ಇದು 4K 60fps ವರೆಗಿನ ವೀಡಿಯೊ ಸಪೋರ್ಟ್‌ ನೀಡುತ್ತದೆ. ಇನ್ನು ಈ ಮೊಬೈಲ್‌ 6,800mAh ಬ್ಯಾಟರಿ ಜೊತೆಗೆ 80W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo