ಜನಪ್ರಿಯ ಒನ್‌ಪ್ಲಸ್ ಕಂಪನಿಯ OnePlus Nord 5 ಮೊಬೈಲ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಒನ್‌ಪ್ಲಸ್ ನಾರ್ಡ್ 5 ಮೊಬೈಲ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಒನ್‌ಪ್ಲಸ್ ಸಂಸ್ಥೆಯ ಈ ಮೊಬೈಲ್ ಕ್ವಾಲ್ಕಮ್ Snapdragon 8s Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ 6,800mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್ ನಾರ್ಡ್ 5 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : WhatsApp ಮೆಸೆಜ್ ಮಾಡುವಾಗ ಈ ಸೀಕ್ರೆಟ್ ಫೀಚರ್ ಬಳಕೆ ಮಾಡಿದ್ದೀರಾ?
ಒನ್‌ಪ್ಲಸ್ ನಾರ್ಡ್ 5 ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 8GB + 256GB ವೇರಿಯಂಟ್ ಬೆಲೆ 34,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 33,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ ಡ್ರೈ ಐಸ್ ಮತ್ತು ಪ್ಯಾಂಟೋಮ್ ಗ್ರೇ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ತಾಣದ ಮೂಲಕ ಖರೀದಿಸಬಹುದಾಗಿದೆ.
ಒನ್‌ಪ್ಲಸ್ ನಾರ್ಡ್ 5 ಮೊಬೈಲ್ ಡಿಸ್‌ಪ್ಲೇಯು 6.83 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 144Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 1800 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ ಕ್ವಾಲ್ಕಮ್ Snapdragon 8s Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಪೊಕೊದ ಈ ಮೊಬೈಲ್ 8GB + 256GB ಹಾಗೂ 12GB RAM + 512GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಲಾಗಿದೆ.
ಹಾಗೆಯೇ ಒನ್‌ಪ್ಲಸ್ ನಾರ್ಡ್ 5 ಮೊಬೈಲ್ ಪ್ರಾಥಮಿಕ ಕ್ಯಾಮೆರಾವು 50MP ಸೋನಿ ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾವೈಡ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 50MP ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಇದ್ದು, ಇದು 4K 60fps ವರೆಗಿನ ವೀಡಿಯೊ ಸಪೋರ್ಟ್ ನೀಡುತ್ತದೆ. ಇನ್ನು ಈ ಮೊಬೈಲ್ 6,800mAh ಬ್ಯಾಟರಿ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.