9,000mAh ಬ್ಯಾಟರಿ ಇರುವ OnePlus Nord 6 ಸ್ಮಾರ್ಟ್‌ಫೋನ್‌ ಬೆಲೆ ಇಳಿಕೆ; ಉಳಿತಾಯ ಖಚಿತ

HIGHLIGHTS

ಅಮೆಜಾನ್‌ನಲ್ಲಿ ಒನ್‌ಪ್ಲಸ್‌ ನಾರ್ಡ್‌ 6 ಮೊಬೈಲ್‌ ಬೆಲೆಯಲ್ಲಿ ಇಳಿಕೆ

ಒನ್‌ಪ್ಲಸ್‌ ನಾರ್ಡ್‌ 6 ಸ್ಮಾರ್ಟ್‌ಫೋನ್‌ 32MP ಸೆಲ್ಫಿ ಕ್ಯಾಮೆರಾ ರಚನೆಯನ್ನು ಪಡೆದಿದೆ

ಒನ್‌ಪ್ಲಸ್‌ ನಾರ್ಡ್‌ 6 ಮೊಬೈಲ್ 9,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದೆ

9,000mAh ಬ್ಯಾಟರಿ ಇರುವ OnePlus Nord 6 ಸ್ಮಾರ್ಟ್‌ಫೋನ್‌ ಬೆಲೆ ಇಳಿಕೆ; ಉಳಿತಾಯ ಖಚಿತ

ಅಮೆಜಾನ್‌ ಪ್ರೈಮ್‌ ಡೇ ಸೇಲ್‌ನಲ್ಲಿ (Amazon Prime Day 2026) ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಬೊಂಬಾಟ್‌ ರಿಯಾಯಿತಿಯಲ್ಲಿ ಲಭ್ಯವಿದೆ. ಈ ವಿಶೇಷ ಮಾರಾಟದಲ್ಲಿ ಒನ್‌ಪ್ಲಸ್‌ ಕಂಪನಿಯ OnePlus Nord 6 ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಚಾನ್ಸ್ ಇದೆ. ಸಂಸ್ಥೆಯ ಈ ಮೊಬೈಲ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 8s ಜೆನ್‌ 4 ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಸಹ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಫ್ರೆಶ್ ಮಿಂಟ್, ಪಿಚ್ ಬ್ಲಾಕ್ ಮತ್ತು ಕ್ವಿಕ್ ಸಿಲ್ವರ್ ಕಲರ್‌ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಒನ್‌ಪ್ಲಸ್‌ ನಾರ್ಡ್‌ 6 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Amazon Prime Day Sale 2026 ಪ್ರಾರಂಭ; ಈ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಆಫರ್‌

OnePlus Nord 6 ಮೊಬೈಲ್‌ ಬೆಲೆಯಲ್ಲಿ ಇಳಿಕೆ

ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒನ್‌ಪ್ಲಸ್‌ ಮೊಬೈಲ್‌ ಕಂಪನಿಯ ಒನ್‌ಪ್ಲಸ್‌ ನಾರ್ಡ್‌ 6 ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಆಯೋಜಿಸಿರುವ ಸೇಲ್‌ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 52,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 42,998 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್‌ ಫ್ರೆಶ್ ಮಿಂಟ್, ಪಿಚ್ ಬ್ಲಾಕ್ ಮತ್ತು ಕ್ವಿಕ್ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯ. ಈ ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

OnePlus Nord 6

ಒನ್‌ಪ್ಲಸ್‌ ನಾರ್ಡ್‌ 6 ಫೀಚರ್ಸ್‌

ಇತ್ತೀಚಿನ ಒನ್‌ಪ್ಲಸ್‌ ನಾರ್ಡ್‌ 6 ಸ್ಮಾರ್ಟ್‌ಫೋನ್‌ 6.78 ಇಂಚಿನ 1.5k ಸೂಪರ್‌ AMOLED ಡಿಸ್‌ಪ್ಲೇಯ ಹೊಂದಿದ್ದು, ಇದು 1,272×2,772 ಪಿಕ್ಸೆಲ್‌ ರೆಸಲ್ಯೂಶನ್‌ ಸಪೋರ್ಟ್‌ ಪಡೆದಿದೆ. ಇದರೊಂದಿಗೆ 165Hz ರಿಫ್ರೆಶ್‌ ರೇಟ್‌ ಸೌಲಭ್ಯದ ಜೊತೆಗೆ 1800 nits ಬ್ರೈಟ್ನೆಸ್‌ ಪಡೆದುಕೊಂಡಿದೆ. ಹಾಗೆಯೇ ಇದು ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 8s Gen 4 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66, IP68, IP69 ಮತ್ತು IP69K ರೇಟಿಂಗ್‌ ಸೌಲಭ್ಯ ಬೆಂಬಲಿಸುತ್ತದೆ.

ಒನ್‌ಪ್ಲಸ್‌ ನಾರ್ಡ್‌ 6 ಸ್ಮಾರ್ಟ್‌ಫೋನ್‌ ಹಿಂಬದಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ LYT-600 CMOS ಸೆನ್ಸಾರ್‌ ಅನ್ನು ಹೊಂದಿದ್ದು ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್‌ 32MP ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಫೋನ್‌ 9,000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 80W SuperVOOC ಚಾರ್ಜಿಂಗ್ ಜೊತೆಗೆ 27W ವೈರ್ಡ್ ರಿವರ್ಸ್ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile