ಜನಪ್ರಿಯ ಒನ್‌ಪ್ಲಸ್ ಮೊಬೈಲ್ ಬ್ರಾಂಡ್‌ನ ಹೊಸ OnePlus Nord 6 ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಕ್ವಾಲ್ಕಮ್ Snapdragon 8s Gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 9,000mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಫ್ರೆಶ್ ಮಿಂಟ್, ಪಿಚ್ ಬ್ಲಾಕ್ ಮತ್ತು ಕ್ವಿಕ್ ಸಿಲ್ವರ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್ ನಾರ್ಡ್ 6 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಜನಪ್ರಿಯ Vivo T5 Pro 5G ಮೊಬೈಲ್ ಬೆಲೆಯಲ್ಲಿ ಭರ್ಜರಿ ಇಳಿಕೆ! ಆಕರ್ಷಕ ಫೀಚರ್ಸ್
ಮೀಡ್‌ರೇಂಜ್ ಬೆಲೆಯಲ್ಲಿ ಜೊತೆಗೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಒನ್‌ಪ್ಲಸ್ ನಾರ್ಡ್ 6 ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 12GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 56,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 47,998 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಅಂದಹಾಗೆ ಈ ಮೊಬೈಲ್ ಫ್ರೆಶ್ ಮಿಂಟ್, ಪಿಚ್ ಬ್ಲಾಕ್ ಮತ್ತು ಕ್ವಿಕ್ ಸಿಲ್ವರ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.
ಇತ್ತೀಚಿನ ಒನ್‌ಪ್ಲಸ್ ನಾರ್ಡ್ 6 ಸ್ಮಾರ್ಟ್‌ಫೋನ್ 6.78 ಇಂಚಿನ 1.5k ಸೂಪರ್ AMOLED ಡಿಸ್‌ಪ್ಲೇಯ ಹೊಂದಿದ್ದು, ಇದು 1,272×2,772 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇದರೊಂದಿಗೆ 165Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 1800 nits ಬ್ರೈಟ್ನೆಸ್ ಪಡೆದುಕೊಂಡಿದೆ. ಹಾಗೆಯೇ ಇದು ಕ್ವಾಲ್ಕಮ್ Snapdragon 8s Gen 4 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66, IP68, IP69 ಮತ್ತು IP69K ರೇಟಿಂಗ್ ಸೌಲಭ್ಯ ಬೆಂಬಲಿಸುತ್ತದೆ.
ಒನ್‌ಪ್ಲಸ್ ನಾರ್ಡ್ 6 ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ LYT-600 CMOS ಸೆನ್ಸಾರ್ ಅನ್ನು ಹೊಂದಿದ್ದು ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಮೊಬೈಲ್ 32MP ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಫೋನ್ 9,000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 80W SuperVOOC ಚಾರ್ಜಿಂಗ್ ಜೊತೆಗೆ 27W ವೈರ್ಡ್ ರಿವರ್ಸ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.