ಲೀಡಿಂಗ್ ಬ್ರಾಂಡ್‌ಗಳ ಪೈಕಿ ಒಂದಾಗಿರುವ OnePlus ಕಂಪನಿಯು ತನ್ನ ಬಹುನಿರೀಕ್ಷಿತ OnePlus Nord 6 ಮೊಬೈಲ್ ಅನ್ನು ಇದೇ ಏಪ್ರಿಲ್‌ನ ಎರಡನೇ ವಾರ ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಮೊಬೈಲ್ ಲಾಂಚ್ ಕುರಿತಾಗಿ ಈಗಾಗಲೇ ಅಮೆಜಾನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಲೈವ್ ಮಾಡಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8s Gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ 9,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವ ನಿರೀಕ್ಷೆಗಳು ಇವೆ. ಅಲ್ಲದೇ ಇದು 50MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆಗಳು ಇವೆ. ಹಾಗಾದರೇ ಒನ್‌ಪ್ಲಸ್ ನಾರ್ಡ್ 6 ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
Also Read : ಸ್ಟೈಲಿಶ್ ಲುಕ್‌ನಲ್ಲಿ Redmi Note 15 SE 5G ಸ್ಮಾರ್ಟ್‌ಫೋನ್ ಬಿಡುಗಡೆ! ಬೆಲೆ ನೋಡಿ
OnePlus ಸಂಸ್ಥೆಯ ಮುಂಬರುವ ಹೊಸ ಒನ್‌ಪ್ಲಸ್ ನಾರ್ಡ್ 6 ಸ್ಮಾರ್ಟ್‌ಫೋನ್ ಮೀಡ್‌ರೇಂಜ್ ದರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವ ನಿರೀಕ್ಷೆಗಳು ಇವೆ. ಅಂದಹಾಗೆ ಈ ಮೊಬೈಲ್ ಇದೇ ಏಪ್ರಿಲ್ 7 ರಂದು ಸಂಜೆ 7 ಗಂಟೆಗೆ ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್ ಆಗಲಿದೆ. ಈ ಮೊಬೈಲ್ ಲಾಂಚ್ ಬಳಿಕ ಅಮೆಜಾನ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್ ಗ್ರೀನ್ ಹಾಗೂ ಪಿಂಕ್ ಕಲರ್ ಆಯ್ಕೆಗಳೊಂದಿಗೆ ಲಗ್ಗೆ ಇಡುವ ನಿರೀಕ್ಷೆಗಳಿವೆ. ಇದು 12GB RAM ವೇರಿಯಂಟ್ ಆಯ್ಕೆ ಒಳಗೊಂಡಿರುವ ಸಾಧ್ಯತೆಗಳು ಇವೆ. ಹಾಗೆಯೇ ಸಂಸ್ಥೆಯು ತನ್ನ ಅಧಿಕೃತ ಟೀಸರ್‌ಗಳಲ್ಲಿ ಒನ್‌ಪ್ಲಸ್ ನಾರ್ಡ್ 6 ಬೆಲೆ 35,000 ರಿಂದ 40,000 ರೂ.ಗಳ ಅಂತರದಲ್ಲಿ ಇರಲಿದೆ ಎಂದು ಸೂಚಿಸಿದೆ. ಆದರೆ ಅಧಿಕೃತ ಬೆಲೆ ಇನ್ನು ಬಹಿರಂಗ ಮಾಡಿಲ್ಲ.
ಮುಂಬರುವ ಹೊಸ ಒನ್‌ಪ್ಲಸ್ ನಾರ್ಡ್ 6 ಸ್ಮಾರ್ಟ್‌ಫೋನ್ ಡಿಸ್‌ಪ್ಲೇಯು 165Hz ರಿಫ್ರೆಶ್ ರೇಟ್ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಇದು ಕ್ವಾಲ್ಕಮ್ Snapdragon 8s Gen 4 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿರುವುದು ನಿಕ್ಕಿ ಎನ್ನಲಾಗಿದೆ. ಇದರೊಂದಿಗೆ ಈ ಫೋನ್ 9,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸಪೋರ್ಟ್ ಒಳಗೊಂಡಿರುವ ಸಾಧ್ಯತೆಗಳು ಅಧಿಕ ಆಗಿವೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66, IP68, IP69 ಮತ್ತು IP69K ರೇಟಿಂಗ್ ಸೌಲಭ್ಯ ಬೆಂಬಲಿಸುತ್ತದೆ.
ಒನ್‌ಪ್ಲಸ್ ನಾರ್ಡ್ 6 ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿರಲಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ Sony Lytia ಸೆನ್ಸಾರ್ ಅನ್ನು ಪಡೆದಿರಲಿದೆ. ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯದಲ್ಲಿ ಇರಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 32MP ಕ್ಯಾಮೆರಾ ರಚನೆ ಪಡೆದುಕೊಂಡಿರಲಿದೆ.