ಭಾರತದಲ್ಲಿ OnePlus Nord 6 ಸ್ಮಾರ್ಟ್‌ಫೋನ್‌ ಬಿಡುಗಡೆ! ಪವರ್‌ಫುಲ್‌ ಫೀಚರ್ಸ್‌

HIGHLIGHTS

ಒನ್‌ಪ್ಲಸ್‌ ನಾರ್ಡ್‌ 6 ಸೇಲ್‌ ಇದೇ ಏಪ್ರಿಲ್‌ 9 ರಿಂದ ಪ್ರಾರಂಭ

ಒನ್‌ಪ್ಲಸ್‌ ನಾರ್ಡ್‌ 6 ಫೋನ್‌ 50MP ಪ್ರಾಥಮಿಕ ಕ್ಯಾಮೆರಾ ಹೊಂದಿದೆ

ಒನ್‌ಪ್ಲಸ್‌ ನಾರ್ಡ್‌ 6 ಮೊಬೈಲ್‌ 9,000mAh ಸಾಮರ್ಥ್ಯದ ಬ್ಯಾಟರಿ ಪಡೆದುಕೊಂಡಿದೆ

ಭಾರತದಲ್ಲಿ OnePlus Nord 6 ಸ್ಮಾರ್ಟ್‌ಫೋನ್‌ ಬಿಡುಗಡೆ! ಪವರ್‌ಫುಲ್‌ ಫೀಚರ್ಸ್‌

OnePlus ಕಂಪನಿಯ ಬಹುನಿರೀಕ್ಷಿತ OnePlus Nord 6 ಸ್ಮಾರ್ಟ್‌ಫೋನ್‌ ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಕೆಲವು ಪವರ್‌ಫುಲ್‌ ಫೀಚರ್ಸ್‌ಗಳೊಂದಿಗೆ ಲಗ್ಗೆ ಇಟ್ಟಿದೆ. ಸ್ನಾಪ್‌ಡ್ರಾಗನ್ 8s Gen 4 ಚಿಪ್‌ಸೆಟ್ ಪ್ರೊಸೆಸರ್‌ ಒಳಗೊಂಡಿರುವ ಜೊತೆಗೆ 9,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಒನ್‌ಪ್ಲಸ್‌ ನಾರ್ಡ್‌ 6 ಫೋನಿನ ಪ್ರಮುಖ ಹೈಲೈಟ್ಸ್‌ ಆಗಿದೆ. ಅಲ್ಲದೇ ಈ ಫೋನಿನ ಡಿಸ್‌ಪ್ಲೇಯು 165Hz ವರೆಗೆ ರಿಫ್ರೆಶ್ ರೇಟ್‌ ಒಳಗೊಂಡಿದೆ. ಇದರೊಂದಿಗೆ ಈ ಮೊಬೈಲ್‌ ಫ್ರೆಶ್ ಮಿಂಟ್, ಪಿಚ್ ಬ್ಲಾಕ್ ಮತ್ತು ಕ್ವಿಕ್ ಸಿಲ್ವರ್ ಬಣ್ಣಗಳ ಆಯ್ಕೆಯೊಂದಿಗೆ ಲಗ್ಗೆ ಇಟ್ಟಿದೆ. ಹಾಗಾದರೇ ಒನ್‌ಪ್ಲಸ್‌ ನಾರ್ಡ್‌ 6 ಮೊಬೈಲ್‌ನ ಬೆಲೆ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.

Digit.in Survey
✅ Thank you for completing the survey!

Also Read : Lenovo ಕಂಪನಿಯಿಂದ ಹೊಸ ಲ್ಯಾಪ್‌ಟಾಪ್‌ಗಳ ಬಿಡುಗಡೆ! ಬೆಲೆ ನೋಡಿ

OnePlus Nord 6 ಬೆಲೆ ಹಾಗೂ ಲಭ್ಯತೆ

ಒನ್‌ಪ್ಲಸ್‌ ಸಂಸ್ಥೆಯ ನೂತನ ಒನ್‌ಪ್ಲಸ್‌ ನಾರ್ಡ್‌ 6 ಸ್ಮಾರ್ಟ್‌ಫೋನ್‌ ಮೀಡ್‌ರೇಂಜ್‌ನಲ್ಲಿ ಮಾರುಕಟ್ಟೆ ಪ್ರವೇಶ ಮಾಡಿದೆ. ಈ ಮೊಬೈಲ್‌ನ 8GB RAM + 256GB ವೇರಿಯಂಟ್‌ ಬೆಲೆಯು 38,999 ರೂ.ಗಳು ಆಗಿದೆ. ಅದೇ ರೀತಿ 12GB RAM + 256GB ವೇರಿಯಂಟ್‌ ಬೆಲೆಯು 41,999 ರೂ.ಗಳು ಆಗಿದೆ. ಇನ್ನು ಆಕ್ಸಸ್‌ ಹಾಗೂ ಹೆಚ್‌ಡಿಎಫ್‌ಸಿ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ 3,000 ರೂ.ಗಳ ಇನ್‌ಸ್ಟಂಟ್‌ ಬ್ಯಾಂಕ್‌ ಡಿಸ್ಕೌಂಟ್‌ ದೊರೆಯುತ್ತದೆ. ಇನ್ನು ಈ ಫೋನ್‌ ಇದೇ ಏಪ್ರಿಲ್‌ 9 ರಿಂದ ಮಧ್ಯಾಹ್ನ 12 ಗಂಟೆಗೆ ಖರೀದಿಗೆ ಲಭ್ಯವಾಗಲಿದೆ. ಅಂದಹಾಗೆ ಈ ಮೊಬೈಲ್‌ ಫ್ರೆಶ್ ಮಿಂಟ್, ಪಿಚ್ ಬ್ಲಾಕ್ ಮತ್ತು ಕ್ವಿಕ್ ಸಿಲ್ವರ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

OnePlus Nord 6

ಒನ್‌ಪ್ಲಸ್‌ ನಾರ್ಡ್‌ 6 ಫೀಚರ್ಸ್‌

ಹೊಸ ಒನ್‌ಪ್ಲಸ್‌ ನಾರ್ಡ್‌ 6 ಸ್ಮಾರ್ಟ್‌ಫೋನ್‌ 6.78 ಇಂಚಿನ 1.5k ಸೂಪರ್‌ AMOLED ಡಿಸ್‌ಪ್ಲೇಯ ಹೊಂದಿದ್ದು, ಇದು 1,272×2,772 ಪಿಕ್ಸೆಲ್‌ ರೆಸಲ್ಯೂಶನ್‌ ಸಪೋರ್ಟ್‌ ಪಡೆದಿದೆ. ಇದರೊಂದಿಗೆ 165Hz ರಿಫ್ರೆಶ್‌ ರೇಟ್‌ ಸೌಲಭ್ಯದ ಜೊತೆಗೆ 1800 nits ಬ್ರೈಟ್ನೆಸ್‌ ಪಡೆದುಕೊಂಡಿದೆ. ಹಾಗೆಯೇ ಇದು ಕ್ವಾಲ್ಕಮ್‌ Snapdragon 8s Gen 4 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66, IP68, IP69 ಮತ್ತು IP69K ರೇಟಿಂಗ್‌ ಸೌಲಭ್ಯ ಬೆಂಬಲಿಸುತ್ತದೆ.

ಒನ್‌ಪ್ಲಸ್‌ ನಾರ್ಡ್‌ 6 ಸ್ಮಾರ್ಟ್‌ಫೋನ್‌ ಹಿಂಬದಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ LYT-600 CMOS ಸೆನ್ಸಾರ್‌ ಅನ್ನು ಹೊಂದಿದ್ದು ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್‌ 32MP ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಫೋನ್‌ 9,000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 80W SuperVOOC ಚಾರ್ಜಿಂಗ್ ಜೊತೆಗೆ 27W ವೈರ್ಡ್ ರಿವರ್ಸ್ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo