9,000mAh ಬ್ಯಾಟರಿ ಇರುವ OnePlus Nord 6 ಮೊಬೈಲ್ ಈಗ ಡಿಸ್ಕೌಂಟ್ ಬೆಲೆಗೆ ಲಭ್ಯ!
ಅಮೆಜಾನ್‌ನಲ್ಲಿ ಒನ್‌ಪ್ಲಸ್ ನಾರ್ಡ್ 6 ಬೆಲೆಯಲ್ಲಿ ಭಾರೀ ಇಳಿಕೆ
ಒನ್‌ಪ್ಲಸ್ ಸಂಸ್ಥೆಯ ಈ ಮೊಬೈಲ್ 9,000mAh ಬ್ಯಾಟರಿ ಪಡೆದುಕೊಂಡಿದೆ
ಒನ್‌ಪ್ಲಸ್‌ನ ಈ ಫೋನ್ Snapdragon 8s Gen 4 ಪ್ರೊಸೆಸರ್ ಹೊಂದಿದೆ
ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ Amazon Great Freedom Sale 2026 ಸೇಲ್ ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಮಾರಾಟದಲ್ಲಿ OnePlus Nord 6 ಮೊಬೈಲ್ ಭರ್ಜರಿ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಇದಷ್ಟೇ ಅಲ್ಲದೆ ಕೆಲವು ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೂಲಕ ಇನ್‌ಸ್ಟಂಟ್ ರಿಯಾಯಿತಿ, ಎಕ್ಸ್‌ಚೇಂಜ್ ಕೊಡುಗೆ, ನೋ-ಕಾಸ್ಟ್ EMI ಹಾಗೂ ಕ್ಯಾಶ್‌ಬ್ಯಾಕ್ ಸೌಲಭ್ಯಗಳನ್ನೂ ಖರೀದಿದಾರರು ಪಡೆಯಬಹುದು. ಅಂದಹಾಗೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದುಕೊಂಡಿರುವ ಜೊತೆಗೆ 9,000mAh ಬ್ಯಾಟರಿ ಸೌಲಭ್ಯ ಹೊಂದಿದೆ. ಹಾಗಾದರೆ ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ನಲ್ಲಿ ಒನ್‌ಪ್ಲಸ್ ನಾರ್ಡ್ 6 ಮೊಬೈಲ್‌ಗೆ ಲಭ್ಯ ಇರುವ ಆಫರ್ ಹಾಗೂ ಫೋನಿನ ಫೀಚರ್ಸ್ ಮುಂದೆ ತಿಳಿಯೋಣ.
SurveyAlso Read : ಸ್ಟೈಲಿಶ್ ಲುಕ್ ಜೊತೆಗೆ ವೇಗದ ಪ್ರೊಸೆಸರ್ ಇರುವ Samsung Galaxy S25 ಬೆಲೆಯಲ್ಲಿ ಇಳಿಕೆ!
OnePlus Nord 6 ಫೋನಿಗೆ ಸಖತ್ ಆಫರ್
ಪ್ರೀಮಿಯಂ ವಿಭಾಗದಲ್ಲಿ ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒನ್‌ಪ್ಲಸ್ ಕಂಪನಿಯ ಒನ್‌ಪ್ಲಸ್ ನಾರ್ಡ್ 6 ಮೊಬೈಲ್ ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ ಸೇಲ್‌ನಲ್ಲಿ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 52,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 44,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ಫ್ರೆಶ್ ಮಿಂಟ್, ಪಿಚ್ ಬ್ಲಾಕ್ ಮತ್ತು ಕ್ವಿಕ್ ಸಿಲ್ವರ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯ. ಈ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ಒನ್‌ಪ್ಲಸ್ ನಾರ್ಡ್ 6 ಮೊಬೈಲ್ ಫೀಚರ್ಸ್
ಒನ್‌ಪ್ಲಸ್ ನಾರ್ಡ್ 6 ಮೊಬೈಲ್ 6.78 ಇಂಚಿನ 1.5k ಸೂಪರ್ AMOLED ಡಿಸ್‌ಪ್ಲೇಯ ಹೊಂದಿದ್ದು, ಇದು 1,272×2,772 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇದರೊಂದಿಗೆ 165Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 1800 nits ಬ್ರೈಟ್ನೆಸ್ ಪಡೆದುಕೊಂಡಿದೆ. ಹಾಗೆಯೇ ಇದು ಕ್ವಾಲ್ಕಮ್ Snapdragon 8s Gen 4 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66, IP68, IP69 ಮತ್ತು IP69K ರೇಟಿಂಗ್ ಸೌಲಭ್ಯ ಬೆಂಬಲಿಸುತ್ತದೆ.
ಒನ್‌ಪ್ಲಸ್ ನಾರ್ಡ್ 6 ಮೊಬೈಲ್ ಹಿಂಬದಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ LYT-600 CMOS ಸೆನ್ಸಾರ್ ಅನ್ನು ಹೊಂದಿದ್ದು ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 32MP ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಫೋನ್ 9,000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 80W SuperVOOC ಚಾರ್ಜಿಂಗ್ ಜೊತೆಗೆ 27W ವೈರ್ಡ್ ರಿವರ್ಸ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
Disclosure: This Article Contains Affiliate Links
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
