ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ Amazon Great Freedom Sale 2026 ಸೇಲ್ ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಮಾರಾಟದಲ್ಲಿ OnePlus Nord 6 ಮೊಬೈಲ್ ಭರ್ಜರಿ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಇದಷ್ಟೇ ಅಲ್ಲದೆ ಕೆಲವು ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೂಲಕ ಇನ್‌ಸ್ಟಂಟ್ ರಿಯಾಯಿತಿ, ಎಕ್ಸ್‌ಚೇಂಜ್ ಕೊಡುಗೆ, ನೋ-ಕಾಸ್ಟ್ EMI ಹಾಗೂ ಕ್ಯಾಶ್‌ಬ್ಯಾಕ್ ಸೌಲಭ್ಯಗಳನ್ನೂ ಖರೀದಿದಾರರು ಪಡೆಯಬಹುದು. ಅಂದಹಾಗೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದುಕೊಂಡಿರುವ ಜೊತೆಗೆ 9,000mAh ಬ್ಯಾಟರಿ ಸೌಲಭ್ಯ ಹೊಂದಿದೆ. ಹಾಗಾದರೆ ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್‌ನಲ್ಲಿ ಒನ್‌ಪ್ಲಸ್ ನಾರ್ಡ್ 6 ಮೊಬೈಲ್‌ಗೆ ಲಭ್ಯ ಇರುವ ಆಫರ್ ಹಾಗೂ ಫೋನಿನ ಫೀಚರ್ಸ್ ಮುಂದೆ ತಿಳಿಯೋಣ.
Also Read : ಸ್ಟೈಲಿಶ್ ಲುಕ್ ಜೊತೆಗೆ ವೇಗದ ಪ್ರೊಸೆಸರ್ ಇರುವ Samsung Galaxy S25 ಬೆಲೆಯಲ್ಲಿ ಇಳಿಕೆ!
ಪ್ರೀಮಿಯಂ ವಿಭಾಗದಲ್ಲಿ ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒನ್‌ಪ್ಲಸ್ ಕಂಪನಿಯ ಒನ್‌ಪ್ಲಸ್ ನಾರ್ಡ್ 6 ಮೊಬೈಲ್ ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ ಸೇಲ್‌ನಲ್ಲಿ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 52,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 44,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ಫ್ರೆಶ್ ಮಿಂಟ್, ಪಿಚ್ ಬ್ಲಾಕ್ ಮತ್ತು ಕ್ವಿಕ್ ಸಿಲ್ವರ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯ. ಈ ಸ್ಮಾರ್ಟ್‌ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ಒನ್‌ಪ್ಲಸ್ ನಾರ್ಡ್ 6 ಮೊಬೈಲ್ 6.78 ಇಂಚಿನ 1.5k ಸೂಪರ್ AMOLED ಡಿಸ್‌ಪ್ಲೇಯ ಹೊಂದಿದ್ದು, ಇದು 1,272×2,772 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇದರೊಂದಿಗೆ 165Hz ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 1800 nits ಬ್ರೈಟ್ನೆಸ್ ಪಡೆದುಕೊಂಡಿದೆ. ಹಾಗೆಯೇ ಇದು ಕ್ವಾಲ್ಕಮ್ Snapdragon 8s Gen 4 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66, IP68, IP69 ಮತ್ತು IP69K ರೇಟಿಂಗ್ ಸೌಲಭ್ಯ ಬೆಂಬಲಿಸುತ್ತದೆ.
ಒನ್‌ಪ್ಲಸ್ ನಾರ್ಡ್ 6 ಮೊಬೈಲ್ ಹಿಂಬದಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ LYT-600 CMOS ಸೆನ್ಸಾರ್ ಅನ್ನು ಹೊಂದಿದ್ದು ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 32MP ಕ್ಯಾಮೆರಾ ರಚನೆ ಒಳಗೊಂಡಿದೆ. ಹಾಗೆಯೇ ಈ ಫೋನ್ 9,000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸೌಲಭ್ಯ ಹೊಂದಿದೆ. ಇದಕ್ಕೆ ಪೂರಕವಾಗಿ 80W SuperVOOC ಚಾರ್ಜಿಂಗ್ ಜೊತೆಗೆ 27W ವೈರ್ಡ್ ರಿವರ್ಸ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
Disclosure: This Article Contains Affiliate Links