OnePlus Nord CE 5 ಸ್ಮಾರ್ಟ್‌ಫೋನ್‌ ಈಗ ಬಿಗ್ ಡಿಸ್ಕೌಂಟ್‌ ಬೆಲೆಯಲ್ಲಿ ಲಭ್ಯ!

HIGHLIGHTS

ಒನ್‌ಪ್ಲಸ್‌ ನಾರ್ಡ್‌ CE 5 ಫೋನ್‌ 120Hz ರಿಫ್ರೆಶ್ ರೇಟ್‌ ಸೌಲಭ್ಯ ಹೊಂದಿದೆ

ಒನ್‌ಪ್ಲಸ್‌ ನಾರ್ಡ್‌ CE 5 ಮೊಬೈಲ್‌ 50MP ಕ್ಯಾಮೆರಾ ರಚನೆ ಅನ್ನು ಪಡೆದಿದೆ

ಒನ್‌ಪ್ಲಸ್‌ ಸಂಸ್ಥೆಯ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8350 ಪ್ರೊಸೆಸರ್‌ ಹೊಂದಿದೆ

ಪ್ರಸ್ತುತ ಇ ಕಾಮರ್ಸ್‌ ತಾಣದ ಮೂಲಕ ಆಫರ್‌ನಲ್ಲಿ ಒನ್‌ಪ್ಲಸ್‌ ಫೋನ್‌ ಖರೀದಿಸುವ ಯೋಚನೆ ಇದ್ದರೆ, ಅಮೆಜಾನ್‌ ಬೆಸ್ಟ್‌ ಎನಿಸುತ್ತದೆ. ಏಕೆಂದರೆ ಸದ್ಯ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಒನ್‌ಪ್ಲಸ್‌ ಸಂಸ್ಥೆಯ OnePlus Nord CE 5 ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್‌ ಆಫರ್‌ ಪಡೆದುಕೊಂಡು ಖರೀದಿಸಿದರೆ ಮತ್ತಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ಒನ್‌ಪ್ಲಸ್‌ನ ಈ ಮೊಬೈಲ್‌ 7,100mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8350 ಅಪೆಕ್ಸ್ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್‌ ನೆಕ್ಸಸ್ ಬ್ಲೂ ಹಾಗೂ ಬ್ಲ್ಯಾಕ್‌ ಇನ್ಫಿನಿಟಿ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 5 ಮೊಬೈಲ್‌ಗೆ ಲಭ್ಯ ಇರುವ ಆಫರ್‌ ಬಗ್ಗೆ ಮುಂದೆ ತಿಳಿಯೋಣ.

Also Read : Vivo V70 FE ಬಿಡುಗಡೆಗೆ ದಿನಗಣನೆ ಶುರು! ನಿರೀಕ್ಷಿತ ಫೀಚರ್ಸ್‌ ಹಾಗೂ ಬೆಲೆ ನೋಡಿ

OnePlus Nord CE 5 ಬೆಲೆಯಲ್ಲಿ ಸಖತ್ ಇಳಿಕೆ

ಜನಪ್ರಿಯ ಒನ್‌ಪ್ಲಸ್‌ ನಾರ್ಡ್‌ CE 5 ಮೊಬೈಲ್‌ ಸದ್ಯ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 8GB RAM + 128 GB ವೇರಿಯಂಟ್‌ 28,999 ರೂಗಳ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಆದರೆ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 24,996 ರೂಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಈ ಫೋನ್‌ ಖರೀದಿಸುವ ಗ್ರಾಹಕರು ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಕೊಡುಗೆ ಹಾಗೂ ಆಕರ್ಷಕ EMI ಆಯ್ಕೆಗಳನ್ನು ಸಹ ಪಡೆಯಬಹುದು. ಅಂದಹಾಗೆ ಈ ಫೋನ್‌ ನೆಕ್ಸಸ್ ಬ್ಲೂ ಹಾಗೂ ಬ್ಲ್ಯಾಕ್‌ ಇನ್ಫಿನಿಟಿ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಒನ್‌ಪ್ಲಸ್‌ ನಾರ್ಡ್‌ CE 5 ಫೋನ್‌ ಫೀಚರ್ಸ್‌

ಒನ್‌ಪ್ಲಸ್‌ ನಾರ್ಡ್‌ CE 5 ಮೊಬೈಲ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.72 ಇಂಚಿನ ಪುಲ್‌ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 1100 nits ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8350 ಅಪೆಕ್ಸ್ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 8GB RAM ಮತ್ತು 128GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ ಒನ್‌ಪ್ಲಸ್‌ ನಾರ್ಡ್‌ CE 5 ಮೊಬೈಲ್‌ ಹಿಂಭಾಗದಲ್ಲಿ ಆಕರ್ಷಕ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿರುವ ಜೊತೆಗೆ 8MP ಸೆನ್ಸಾರ್‌ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 16MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ 7,100mAh ಬ್ಯಾಟರಿ ಜೊತೆಗೆ 80W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ. ಅಲ್ಲದೇ ಇದು ಡ್ಯುಯಲ್ ಸಿಮ್ 5G, ವೈ-ಫೈ 6, ಬ್ಲೂಟೂತ್ 5.4, NFC ಮತ್ತು IR ಬ್ಲಾಸ್ಟರ್‌ಗಳ ಆಯ್ಕೆಗಳನ್ನು ಪಡೆದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :