OnePlus Nord CE 6 ಬಿಡುಗಡೆಗೆ ದಿನಾಂಕ ಫಿಕ್ಸ್! 8,000mAh ಬ್ಯಾಟರಿ ಪಕ್ಕಾ
ಮೇ 7 ರಂದು ಒನ್‌ಪ್ಲಸ್ ನಾರ್ಡ್ CE 6 ಬಿಡುಗಡೆ
ಮುಂಬರುವ ಈ ಫೋನ್ ಸ್ನಾಪ್‌ಡ್ರಾಗನ್ 7s ಜೆನ್ 4 ಪ್ರೊಸೆಸರ್ ಪಡೆದಿದೆ
ಒನ್‌ಪ್ಲನ್‌ನ ಈ ಮೊಬೈಲ್ ಮೂರು ಆಕರ್ಷಕ ಕಲರ್ ಆಯ್ಕೆಯಲ್ಲಿ ಲಗ್ಗೆ ಇಡಲಿದೆ
OnePlus ಕಂಪನಿಯು ತನ್ನ ನಾರ್ಡ್ ಸರಣಿಗೆ ಈಗ ಹೊಸದಾಗಿ OnePlus Nord CE 6 ಮೊಬೈಲ್ ಅನ್ನು ಸೇರ್ಪಡೆ ಮಾಡಲು ಸಜ್ಜಾಗುತ್ತಿದೆ. ಒನ್‌ಪ್ಲಸ್ ಸಂಸ್ಥೆಯ ನೂತನ ಒನ್‌ಪ್ಲಸ್ ನಾರ್ಡ್ CE 6 ಫೋನ್ ಇದೇ ಮೇ 7 ರಂದು ದೇಶೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಮೊಬೈಲ್ ಲಾಂಚ್ ಕುರಿತಾಗಿ ಈಗಾಗಲೇ ಅಮೆಜಾನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಲೈವ್ ಮಾಡಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವ ನಿರೀಕ್ಷೆಗಳು ಇವೆ. ಅಲ್ಲದೇ ಇದು 50MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆಗಳು ಇವೆ. ಹಾಗಾದರೇ ಒನ್‌ಪ್ಲಸ್ ನಾರ್ಡ್ CE 6 ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
SurveyAlso Read : ನಿಮ್ಮ Smartphone ಸುರಕ್ಷಿತವಾಗಿದೆಯೇ? ಫೋನ್ ಹ್ಯಾಕ್ ಆಗದಂತೆ ತಡೆಯಲು ಹೀಗೆ ಮಾಡಿ!
OnePlus Nord CE 6 ಲಾಂಚ್‌ಗೆ ಮುಹೂರ್ತ ಫಿಕ್ಸ್
ಒನ್‌ಪ್ಲಸ್ ಸಂಸ್ಥೆಯ ಮುಂಬರುವ ನೂತನ ಒನ್‌ಪ್ಲಸ್ ನಾರ್ಡ್ CE 6 ಸ್ಮಾರ್ಟ್‌ಫೋನ್ ಬಜೆಟ್ ದರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆಗಳು ಇವೆ. ಅಂದಹಾಗೆ ಈ ಮೊಬೈಲ್ ಇದೇ ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್ ಆಗಲಿದೆ. ಈ ಮೊಬೈಲ್ ಲಾಂಚ್ ಬಳಿಕ ಅಮೆಜಾನ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್ ಫ್ರೆಶ್ ಬ್ಲೂ, ಲೂನಾರ್ ಪರ್ಲ್ ಮತ್ತು ಪಿಚ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ.

ಒನ್‌ಪ್ಲಸ್ ನಾರ್ಡ್ CE 6 ನಿರೀಕ್ಷಿತ ಫೀಚರ್ಸ್
ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಡಲಿರುವ ಒನ್‌ಪ್ಲಸ್ ನಾರ್ಡ್ CE 6 ಸ್ಮಾರ್ಟ್‌ಫೋನ್ ಡಿಸ್‌ಪ್ಲೇಯು 144Hz ರಿಫ್ರೆಶ್ ರೇಟ್ ಜೊತೆಗೆ 1.5K ರೆಸಲ್ಯೂಶನ್ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಇದು ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಇದರೊಂದಿಗೆ ಈ ಫೋನ್ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸಪೋರ್ಟ್ ಒಳಗೊಂಡಿರುವ ಸಾಧ್ಯತೆಗಳು ಅಧಿಕ ಆಗಿವೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ ಆಕ್ಸಿಜನ್‌ಓಎಸ್ 16 ನಲ್ಲಿ ಕಾರ್ಯನಿರ್ವಹಿಸಲಿದೆ.
ಒನ್‌ಪ್ಲಸ್ ನಾರ್ಡ್ CE 6 ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿರಲಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ Sony Lytia ಸೆನ್ಸಾರ್ ಅನ್ನು ಪಡೆದಿರಲಿದೆ. ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯದಲ್ಲಿ ಇರಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 32MP ಕ್ಯಾಮೆರಾ ರಚನೆ ಪಡೆದುಕೊಂಡಿರಲಿದೆ. ಈ ಫೋನ್ 27W ರಿವರ್ಸ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿರುವ ಸಾಧ್ಯತೆಗಳು ಇವೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile