OnePlus ಕಂಪನಿಯು ತನ್ನ ನಾರ್ಡ್ ಸರಣಿಗೆ ಈಗ ಹೊಸದಾಗಿ OnePlus Nord CE 6 ಮೊಬೈಲ್ ಅನ್ನು ಸೇರ್ಪಡೆ ಮಾಡಲು ಸಜ್ಜಾಗುತ್ತಿದೆ. ಒನ್‌ಪ್ಲಸ್ ಸಂಸ್ಥೆಯ ನೂತನ ಒನ್‌ಪ್ಲಸ್ ನಾರ್ಡ್ CE 6 ಫೋನ್ ಇದೇ ಮೇ 7 ರಂದು ದೇಶೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಮೊಬೈಲ್ ಲಾಂಚ್ ಕುರಿತಾಗಿ ಈಗಾಗಲೇ ಅಮೆಜಾನ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಲೈವ್ ಮಾಡಲಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವ ನಿರೀಕ್ಷೆಗಳು ಇವೆ. ಅಲ್ಲದೇ ಇದು 50MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಸಾಧ್ಯತೆಗಳು ಇವೆ. ಹಾಗಾದರೇ ಒನ್‌ಪ್ಲಸ್ ನಾರ್ಡ್ CE 6 ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
Also Read : ನಿಮ್ಮ Smartphone ಸುರಕ್ಷಿತವಾಗಿದೆಯೇ? ಫೋನ್ ಹ್ಯಾಕ್ ಆಗದಂತೆ ತಡೆಯಲು ಹೀಗೆ ಮಾಡಿ!
ಒನ್‌ಪ್ಲಸ್ ಸಂಸ್ಥೆಯ ಮುಂಬರುವ ನೂತನ ಒನ್‌ಪ್ಲಸ್ ನಾರ್ಡ್ CE 6 ಸ್ಮಾರ್ಟ್‌ಫೋನ್ ಬಜೆಟ್ ದರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆಗಳು ಇವೆ. ಅಂದಹಾಗೆ ಈ ಮೊಬೈಲ್ ಇದೇ ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್ ಆಗಲಿದೆ. ಈ ಮೊಬೈಲ್ ಲಾಂಚ್ ಬಳಿಕ ಅಮೆಜಾನ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಸೇಲ್ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್ ಫ್ರೆಶ್ ಬ್ಲೂ, ಲೂನಾರ್ ಪರ್ಲ್ ಮತ್ತು ಪಿಚ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ.
ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಡಲಿರುವ ಒನ್‌ಪ್ಲಸ್ ನಾರ್ಡ್ CE 6 ಸ್ಮಾರ್ಟ್‌ಫೋನ್ ಡಿಸ್‌ಪ್ಲೇಯು 144Hz ರಿಫ್ರೆಶ್ ರೇಟ್ ಜೊತೆಗೆ 1.5K ರೆಸಲ್ಯೂಶನ್ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಇದು ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಇದರೊಂದಿಗೆ ಈ ಫೋನ್ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸಪೋರ್ಟ್ ಒಳಗೊಂಡಿರುವ ಸಾಧ್ಯತೆಗಳು ಅಧಿಕ ಆಗಿವೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ ಆಕ್ಸಿಜನ್‌ಓಎಸ್ 16 ನಲ್ಲಿ ಕಾರ್ಯನಿರ್ವಹಿಸಲಿದೆ.
ಒನ್‌ಪ್ಲಸ್ ನಾರ್ಡ್ CE 6 ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿರಲಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ Sony Lytia ಸೆನ್ಸಾರ್ ಅನ್ನು ಪಡೆದಿರಲಿದೆ. ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯದಲ್ಲಿ ಇರಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 32MP ಕ್ಯಾಮೆರಾ ರಚನೆ ಪಡೆದುಕೊಂಡಿರಲಿದೆ. ಈ ಫೋನ್ 27W ರಿವರ್ಸ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿರುವ ಸಾಧ್ಯತೆಗಳು ಇವೆ.