ಮೇ 12 ರಂದು OnePlus Nord CE 6 Lite ಸ್ಮಾರ್ಟ್‌ಫೋನ್ ಸೇಲ್ ಪ್ರಾರಂಭ!
ಮೇ 12 ರಂದು ಒನ್‌ಪ್ಲಸ್ ನಾರ್ಡ್ CE 6 ಲೈಟ್ ಫೋನ್ ಸೇಲ್
ಈ ಹೊಸ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಪೆಕ್ಸ್ ಪ್ರೊಸೆಸರ್ ಹೊಂದಿದೆ
ಒನ್‌ಪ್ಲಸ್‌ನ ಈ ಮೊಬೈಲ್ ವಿವಿಧ ಮಿಂಟ್ ಹಾಗೂ ಹೈಪರ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯ
ಒನ್‌ಪ್ಲಸ್ ಕಂಪನಿಯ ನೂತನ OnePlus Nord CE 6 Lite ಮೊಬೈಲ್ ಬಜೆಟ್ ಬೆಲೆಯ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಮೊಬೈಲ್ ಇದೇ ಮೇ 12 ರಂದು ಭಾರತೀಯ ಮಾರುಕಟ್ಟೆಯಲ್ಲಿ ಸೇಲ್ ಪ್ರಾರಂಭ ಮಾಡಲಿದೆ. ಇನ್ನು ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಪೆಕ್ಸ್ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒಳಗೊಂಡಿರುವ ಜೊತೆಗೆ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಹಾಗೆಯೇ ಸ್ಮಾರ್ಟ್‌ಫೋನ್ ವಿವಿಧ ಮಿಂಟ್ ಹಾಗೂ ಹೈಪರ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೆ ಒನ್‌ಪ್ಲಸ್ ನಾರ್ಡ್ CE 6 ಲೈಟ್ ಮೊಬೈಲ್‌ನ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಇಂದಿನಿಂದ OnePlus Nord CE6 ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ! ಬೆಲೆ ನೋಡಿ
OnePlus Nord CE 6 Lite ಫೋನ್ ಸೇಲ್ ಮಾಹಿತಿ
ನೂತನ ಒನ್‌ಪ್ಲಸ್ ನಾರ್ಡ್ CE 6 ಲೈಟ್ ಫೋನ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಈ ಫೋನ್ ಇದೇ ಮೇ 12 ರಂದು ಸೇಲ್ ಪ್ರಾರಂಭಿಸಿದೆ. ಅಂದಹಾಗೆ ಈ ಮೊಬೈಲ್‌ನ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 18,999 ರೂ.ಗಳು ಆಗಿದೆ. ಹಾಗೆಯೇ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 20,999 ರೂ.ಗಳು ಆಗಿದೆ. ಇದೇ ರೀತಿ 8GB + 256GB ಸ್ಟೋರೇಜ್ ವೇರಿಯಂಟ್ 23,999 ರೂ.ಗಳು ಆಗಿದೆ. ಈ ಮೊಬೈಲ್ ವಿವಿಧ ಮಿಂಟ್ ಹಾಗೂ ಹೈಪರ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ.

ಒನ್‌ಪ್ಲಸ್ ನಾರ್ಡ್ CE 6 ಲೈಟ್ ಮೊಬೈಲ್ ಫೀಚರ್ಸ್
ಒನ್‌ಪ್ಲಸ್ ನಾರ್ಡ್ CE 6 ಲೈಟ್ ಮೊಬೈಲ್ 144Hz ರಿಫ್ರೆಶ್ ರೇಟ್ ಜೊತೆಗೆ 6.78 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB + 128GB ಹಾಗೂ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನ್ MIL STD 810H ಮಿಲಿಟರಿ ದರ್ಜೆಯ ಬಾಳಿಕೆ ಜೊತೆಗೆ IP66, IP68, IP69 ಮತ್ತು IP69K ರೇಟಿಂಗ್ ಸೌಲಭ್ಯ ಪಡೆದಿದೆ.
ಒನ್‌ಪ್ಲಸ್ ನಾರ್ಡ್ CE 6 ಲೈಟ್ ಸ್ಮಾರ್ಟ್‌ಫೋನ್ ಹಿಂಬದಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 2MP ಡೆಪ್ತ್ ಸೆನ್ಸಾರ್ ಸೌಲಭ್ಯದಲ್ಲಿ ಒಳಗೊಂಡಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8MP ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ 7,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸಪೋರ್ಟ್ ಒಳಗೊಂಡಿದೆ. ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile