ಇಂದಿನಿಂದ OnePlus Nord CE6 ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ! ಬೆಲೆ ನೋಡಿ

HIGHLIGHTS

ಒನ್‌ಪ್ಲಸ್‌ ನಾರ್ಡ್‌ CE6 ಫೋನ್‌ ಈಗ ಖರೀದಿಗೆ ಲಭ್ಯ

ಈ ಫೋನ್‌ ಸ್ನಾಪ್‌ಡ್ರಾಗನ್ 7s Gen 4 ಪ್ರೊಸೆಸರ್‌ ಹೊಂದಿದೆ

ಈ ಮೊಬೈಲ್‌ ಫ್ರೇಶ್ ಬ್ಲೂ, ಪಿಂಚ್ ಬ್ಲ್ಯಾಕ್ ಹಾಗೂ ಲೂನಾರ್ ಪರ್ಲ್ ಬಣ್ಣಗಳಲ್ಲಿ ಲಭ್ಯ

ಇಂದಿನಿಂದ OnePlus Nord CE6 ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ! ಬೆಲೆ ನೋಡಿ

ಒನ್‌ಪ್ಲಸ್‌ ಕಂಪನಿಯ ನೂತನ OnePlus Nord CE6 ಮೊಬೈಲ್‌ ಬಜೆಟ್‌ ಬೆಲೆಯ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಫೋನ್‌ ಇಂದು (ಮೇ 8 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಪ್ರಾರಂಭ ಮಾಡಿದೆ. ಇನ್ನು ಈ ಮೊಬೈಲ್‌ Snapdragon 7s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಮೊಬೈಲ್‌ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಒಳಗೊಂಡಿರುವ ಜೊತೆಗೆ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಹಾಗೆಯೇ ಸ್ಮಾರ್ಟ್‌ಫೋನ್‌ ಫ್ರೇಶ್ ಬ್ಲೂ, ಪಿಂಚ್ ಬ್ಲ್ಯಾಕ್ ಹಾಗೂ ಲೂನಾರ್ ಪರ್ಲ್ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೆ ಒನ್‌ಪ್ಲಸ್‌ ನಾರ್ಡ್‌ CE6 ಮೊಬೈಲ್‌ನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್: ಹೊಸ 5.2.4 True Dolby Atmos ಸೌಂಡ್‌ಬಾರ್ ಮೇಲೆ ಭರ್ಜರಿ ಡೀಲ್.!

OnePlus Nord CE6 ಫೋನ್‌ ಸೇಲ್‌ ಮಾಹಿತಿ

ನೂತನ ಒನ್‌ಪ್ಲಸ್‌ ನಾರ್ಡ್‌ CE6 ಫೋನ್‌ ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ನಲ್ಲಿ ಇದೀಗ ಗ್ರೇಟ್‌ ಸಮ್ಮರ್ ಸೇಲ್‌ ಲೈವ್‌ ಇದೆ. ಈ ಮಾರಾಟದಲ್ಲಿ ಈ ಫೋನ್‌ ಇಂದು (ಮೇ 8 ರಂದು) ಸೇಲ್‌ ಪ್ರಾರಂಭಿಸಿದೆ. ಅಂದಹಾಗೆ ಈ ಫೋನಿನ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆ 27,999 ರೂ.ಗಳು ಆಗಿದೆ. ಹಾಗೆಯೇ 8GB + 256 GB ಸ್ಟೋರೇಜ್‌ ವೇರಿಯಂಟ್‌ ಬೆಲೆ 30,999 ರೂ.ಗಳು ಆಗಿದೆ. ಈ ಮೊಬೈಲ್ ಫ್ರೇಶ್ ಬ್ಲೂ, ಪಿಂಚ್ ಬ್ಲ್ಯಾಕ್ ಹಾಗೂ ಲೂನಾರ್ ಪರ್ಲ್ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ.

OnePlus Nord CE6

ಒನ್‌ಪ್ಲಸ್‌ ನಾರ್ಡ್‌ CE6 ಮೊಬೈಲ್‌ ಫೀಚರ್ಸ್‌

ಒನ್‌ಪ್ಲಸ್‌ ನಾರ್ಡ್‌ CE6 ಮೊಬೈಲ್‌ 144Hz ರಿಫ್ರೆಶ್ ರೇಟ್‌ ಜೊತೆಗೆ 6.78 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದೆ. ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಅನ್ನು ಪಡೆದುಕೊಂಡಿದೆ. ಈ ಫೋನ್‌ 8GB + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನ್‌ MIL STD 810H ಮಿಲಿಟರಿ ದರ್ಜೆಯ ಬಾಳಿಕೆ ಜೊತೆಗೆ IP66, IP68, IP69 ಮತ್ತು IP69K ರೇಟಿಂಗ್‌ ಸೌಲಭ್ಯ ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ CE 6 ಸ್ಮಾರ್ಟ್‌ಫೋನ್‌ ಹಿಂಬದಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ Sony Lytia ಸೆನ್ಸಾರ್‌ ಅನ್ನು ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 2MP ಡೆಪ್ತ್ ಸೆನ್ಸಾರ್‌ ಸೌಲಭ್ಯದಲ್ಲಿ ಒಳಗೊಂಡಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್‌ 8MP ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್‌ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸಪೋರ್ಟ್‌ ಒಳಗೊಂಡಿದೆ. ಇದಕ್ಕೆ ಪೂರಕವಾಗಿ 80W ಫಾಸ್ಟ್‌ ಚಾರ್ಜಿಂಗ್ ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile