80W ಫಾಸ್ಟ್‌ ಚಾರ್ಜಿಂಗ್ ಇರುವ OnePlus Nord CE6 ಮೊಬೈಲ್‌ ಇದೀಗ ಡಿಸ್ಕೌಂಟ್‌ನಲ್ಲಿ ಲಭ್ಯ!

HIGHLIGHTS

ಅಮೆಜಾನ್‌ ತಾಣದಲ್ಲಿ ಒನ್‌ಪ್ಲಸ್‌ ನಾರ್ಡ್‌ CE6 ಫೋನಿಗೆ ಸಖತ್ ಕೊಡುಗೆ

ಒನ್‌ಪ್ಲಸ್‌ ನಾರ್ಡ್‌ CE6 ಮೊಬೈಲ್‌ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ

ಒನ್‌ಪ್ಲಸ್‌ನ ಈ ಫೋನ್‌ ಫ್ರೇಶ್ ಬ್ಲೂ, ಪಿಂಚ್ ಬ್ಲ್ಯಾಕ್ ಹಾಗೂ ಲೂನಾರ್ ಪರ್ಲ್ ಕಲರ್‌ನಲ್ಲಿ ಲಭ್ಯ

80W ಫಾಸ್ಟ್‌ ಚಾರ್ಜಿಂಗ್ ಇರುವ OnePlus Nord CE6 ಮೊಬೈಲ್‌ ಇದೀಗ ಡಿಸ್ಕೌಂಟ್‌ನಲ್ಲಿ ಲಭ್ಯ!

ಲೀಡಿಂಗ್ ಇ ಕಾಮರ್ಸ್‌ ಎಂದೇ ಗುರುತಿಸಿಕೊಂಡಿರುವ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ಒನ್‌ಪ್ಲಸ್‌ ಕಂಪನಿಯ OnePlus Nord CE6 ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 8,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್‌ ನಾರ್ಡ್‌ CE6 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 6,000mAh ಬ್ಯಾಟರಿ ಇರುವ Vivo T4 Lite 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

OnePlus Nord CE6 ಫೋನಿಗೆ ಭರ್ಜರಿ ಆಫರ್‌

ಬಜೆಟ್ ದರ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒನ್‌ಪ್ಲಸ್‌ ನಾರ್ಡ್‌ CE6 ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 40,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 34,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಫ್ರೇಶ್ ಬ್ಲೂ, ಪಿಂಚ್ ಬ್ಲ್ಯಾಕ್ ಹಾಗೂ ಲೂನಾರ್ ಪರ್ಲ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ಒನ್‌ಪ್ಲಸ್‌ ನಾರ್ಡ್‌ CE6 ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

OnePlus Nord CE6 5G gets 7000 rs discount on Amazon Great Freedom Sale 2026
OnePlus Nord CE6 5G

ಒನ್‌ಪ್ಲಸ್‌ ನಾರ್ಡ್‌ CE6 ಮೊಬೈಲ್‌ ಫೀಚರ್ಸ್‌

ಒನ್‌ಪ್ಲಸ್‌ ನಾರ್ಡ್‌ CE6 ಮೊಬೈಲ್‌ 144Hz ರಿಫ್ರೆಶ್ ರೇಟ್‌ ಜೊತೆಗೆ 6.78 ಇಂಚಿನ 1.5K AMOLED ಡಿಸ್‌ಪ್ಲೇ ಹೊಂದಿದೆ. ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಅನ್ನು ಪಡೆದುಕೊಂಡಿದೆ. ಈ ಫೋನ್‌ 8GB + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನ್‌ MIL STD 810H ಮಿಲಿಟರಿ ದರ್ಜೆಯ ಬಾಳಿಕೆ ಜೊತೆಗೆ IP66, IP68, IP69 ಮತ್ತು IP69K ರೇಟಿಂಗ್‌ ಸೌಲಭ್ಯ ಪಡೆದಿದೆ.

ಒನ್‌ಪ್ಲಸ್‌ ನಾರ್ಡ್‌ CE 6 ಸ್ಮಾರ್ಟ್‌ಫೋನ್‌ ಹಿಂಬದಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ Sony Lytia ಸೆನ್ಸಾರ್‌ ಅನ್ನು ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 2MP ಡೆಪ್ತ್ ಸೆನ್ಸಾರ್‌ ಸೌಲಭ್ಯದಲ್ಲಿ ಒಳಗೊಂಡಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್‌ 8MP ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್‌ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸಪೋರ್ಟ್‌ ಒಳಗೊಂಡಿದೆ. ಇದಕ್ಕೆ ಪೂರಕವಾಗಿ 80W ಫಾಸ್ಟ್‌ ಚಾರ್ಜಿಂಗ್ ಒಳಗೊಂಡಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile