ಅಮೆಜಾನ್‌ನಲ್ಲಿ OnePlus Nord CE6 ಮೊಬೈಲ್‌ಗೆ ಆಕರ್ಷಕ ಡಿಸ್ಕೌಂಟ್! ಖರೀದಿಗೆ ಒಳ್ಳೆಯ ಸಮಯ
ಅಮೆಜಾನ್‌ನಲ್ಲಿ ಒನ್‌ಪ್ಲಸ್ ನಾರ್ಡ್ CE6 ಫೋನ್‌ಗೆ ಬಿಗ್ ಡಿಸ್ಕೌಂಟ್
ಒನ್‌ಪ್ಲಸ್ ನಾರ್ಡ್ CE6 ಮೊಬೈಲ್ 8,000mAh ಬ್ಯಾಟರಿ ಪವರ್ ಪಡೆದಿದೆ
ಒನ್‌ಪ್ಲಸ್‌ನ ಈ ಫೋನ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್ ಹೊಂದಿದೆ
ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಒನ್‌ಪ್ಲಸ್ ಕಂಪನಿಯ OnePlus Nord CE6 ಸ್ಮಾರ್ಟ್‌ಫೋನ್ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್ 8,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಫ್ರೇಶ್ ಬ್ಲೂ, ಪಿಂಚ್ ಬ್ಲ್ಯಾಕ್ ಹಾಗೂ ಲೂನಾರ್ ಪರ್ಲ್ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್ ನಾರ್ಡ್ CE6 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : POCO X8 Power ಸ್ಮಾರ್ಟ್‌ಫೋನ್ ಬಿಡುಗಡೆಗೆ ಮುಹೂರ್ತ ಫಿಕ್ಸ್! 10,000m ಬ್ಯಾಟರಿ ಖಚಿತ
Motorola Edge 60 Pro ಮೊಬೈಲ್ ಬೆಲೆಯಲ್ಲಿ ಇಳಿಕೆ
ಆಕರ್ಷಕ ಫೀಚರ್ಸ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿರುವ ಒನ್‌ಪ್ಲಸ್ ನಾರ್ಡ್ CE6 ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 40,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 37,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಫ್ರೇಶ್ ಬ್ಲೂ, ಪಿಂಚ್ ಬ್ಲ್ಯಾಕ್ ಹಾಗೂ ಲೂನಾರ್ ಪರ್ಲ್ ಕಲರ್ ಆಯ್ಕೆಯಲ್ಲಿ ಲಭ್ಯ.

ಒನ್‌ಪ್ಲಸ್ ನಾರ್ಡ್ CE6 ಫೋನ್ ಫೀಚರ್ಸ್ ಮಾಹಿತಿ
ಒನ್‌ಪ್ಲಸ್ ನಾರ್ಡ್ CE6 ಫೋನ್ 144Hz ರಿಫ್ರೆಶ್ ರೇಟ್ ಜೊತೆಗೆ 6.78 ಇಂಚಿನ 1.5K AMOLED ಡಿಸ್‌ಪ್ಲೇ ಪಡೆದುಕೊಂಡಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದೆ. ಈ ಫೋನ್ 8GB + 128GB ಹಾಗೂ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನ್ MIL STD 810H ಮಿಲಿಟರಿ ದರ್ಜೆಯ ಬಾಳಿಕೆ ಜೊತೆಗೆ IP66, IP68, IP69 ಮತ್ತು IP69K ರೇಟಿಂಗ್ ಸೌಲಭ್ಯ ಒಳಗೊಂಡಿದೆ.
ಒನ್‌ಪ್ಲಸ್ ನಾರ್ಡ್ CE 6 ಮೊಬೈಲ್ ಹಿಂಬದಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ Sony Lytia ಸೆನ್ಸಾರ್ ಅನ್ನು ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 2MP ಡೆಪ್ತ್ ಸೆನ್ಸಾರ್ ಸೌಲಭ್ಯದಲ್ಲಿ ಒಳಗೊಂಡಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್ 8MP ಕ್ಯಾಮೆರಾ ರಚನೆ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸಪೋರ್ಟ್ ಒಳಗೊಂಡಿದೆ. ಇದಕ್ಕೆ ಪೂರಕವಾಗಿ 80W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
