ಇಂದು ಭಾರತದಲ್ಲಿ OnePlus Nord CE6 ಮೊಬೈಲ್‌ ಲಾಂಚ್! ನಿರೀಕ್ಷಿತ ಫೀಚರ್ಸ್‌

HIGHLIGHTS

ಇಂದು ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE6 ಮೊಬೈಲ್‌ ಲಾಂಚ್

ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಪ್ರೊಸೆಸರ್‌ ಪಡೆದಿರಲಿದೆ

ಈ ಮೊಬೈಲ್‌ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಪವರ್‌ ಹೊಂದಿರಲಿದೆ

ಇಂದು ಭಾರತದಲ್ಲಿ OnePlus Nord CE6 ಮೊಬೈಲ್‌ ಲಾಂಚ್! ನಿರೀಕ್ಷಿತ ಫೀಚರ್ಸ್‌

ಒನ್‌ಪ್ಲಸ್‌ ಸಂಸ್ಥೆಯ ಹೊಸ OnePlus Nord CE6 ಮೊಬೈಲ್‌ ಮಾರುಕಟ್ಟೆಗೆ ಬರಲು ಸಜ್ಜಾಗಿದ್ದು, ಇದರ ನಿರೀಕ್ಷಿತ ಫೀಚರ್ಸ್‌ ಗ್ರಾಹಕರ ಕುತೂಹಲ ಹೆಚ್ಚಿಸಿವೆ. ಅಂದಹಾಗೆ ಒನ್‌ಪ್ಲಸ್‌ ಕಂಪನಿಯ ನೂತನ ಒನ್‌ಪ್ಲಸ್‌ ನಾರ್ಡ್‌ CE 6 ಮೊಬೈಲ್‌ ಇಂದು (ಮೇ 7 ರಂದು) ದೇಶೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಆಗಿಲಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆ ಕುರಿತಾಗಿ ಈಗಾಗಲೇ ಅಮೆಜಾನ್‌ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ತೆರೆಯಲಾಗಿದೆ. ಅಂದಹಾಗೆ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಒಳಗೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವ ಸಾಧ್ಯತೆಗಳು ಇವೆ. ಅಲ್ಲದೇ ಇದು 50MP ಪ್ರಾಥಮಿಕ ಕ್ಯಾಮೆರಾ ಸೆಟ್‌ಅಪ್‌ ಹೊಂದಿರುವ ನಿರೀಕ್ಷೆಗಳು ಇವೆ. ಹಾಗಾದರೇ ಒನ್‌ಪ್ಲಸ್‌ ನಾರ್ಡ್‌ CE 6 ಮೊಬೈಲ್‌ನ ಲಾಂಚ್‌ ಹಾಗೂ ನಿರೀಕ್ಷಿತ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.

Digit.in Survey
✅ Thank you for completing the survey!

Also Read : ಭಾರತದಲ್ಲಿ ದೈತ್ಯ Vivo ‍X300 Ultra ಸ್ಮಾರ್ಟ್‌ಫೋನ್‌ ಬಿಡುಗಡೆ! 200MP ಕ್ಯಾಮೆರಾ ವಿಶೇಷ

OnePlus Nord CE6 ಮೊಬೈಲ್‌ ಇಂದು ಬಿಡುಗಡೆ

ಒನ್‌ಪ್ಲಸ್‌ ಕಂಪನಿಯ ಹೊಸ ಒನ್‌ಪ್ಲಸ್‌ ನಾರ್ಡ್‌ CE 6 ಸ್ಮಾರ್ಟ್‌ಫೋನ್‌ ಮೀಡ್‌ರೇಂಜ್‌ ದರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆಗಳು ಇವೆ. ಅಂದಹಾಗೆ ಈ ಮೊಬೈಲ್‌ ಇಂದು (ಮೇ 7 ರಂದು) ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್‌ ಆಗಲಿದೆ. ಈ ಮೊಬೈಲ್‌ ಲಾಂಚ್‌ ಬಳಿಕ ಅಮೆಜಾನ್‌ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್‌ ಸ್ಟೋರ್‌ ಮೂಲಕ ಸೇಲ್‌ ಪ್ರಾರಂಭ ಮಾಡಲಿದೆ. ಭಾರತದಲ್ಲಿ ಈ ಫೋನ್‌ ಫ್ರೆಶ್ ಬ್ಲೂ, ಲೂನಾರ್ ಪರ್ಲ್ ಮತ್ತು ಪಿಚ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆಗಳು ಇವೆ.

OnePlus Nord CE6

ಒನ್‌ಪ್ಲಸ್‌ ನಾರ್ಡ್‌ CE 6 ನಿರೀಕ್ಷಿತ ಫೀಚರ್ಸ್‌

ಸಂಸ್ಥೆಯ ನೂತನ ಒನ್‌ಪ್ಲಸ್‌ ನಾರ್ಡ್‌ CE 6 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇಯು 144Hz ರಿಫ್ರೆಶ್‌ ರೇಟ್‌ ಜೊತೆಗೆ 1.5K ರೆಸಲ್ಯೂಶನ್ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಇದು ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್ 7s ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಸೌಲಭ್ಯ ಪಡೆದಿರುವುದು ಪಕ್ಕಾ ಎನ್ನಲಾಗಿದೆ. ಇದರೊಂದಿಗೆ ಈ ಫೋನ್‌ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸಪೋರ್ಟ್‌ ಒಳಗೊಂಡಿರುವ ಸಾಧ್ಯತೆಗಳು ಅಧಿಕ ಆಗಿವೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ ಆಕ್ಸಿಜನ್‌ಓಎಸ್ 16 ನಲ್ಲಿ ಕಾರ್ಯನಿರ್ವಹಿಸಲಿದೆ.

ಒನ್‌ಪ್ಲಸ್‌ ನಾರ್ಡ್‌ CE 6 ಸ್ಮಾರ್ಟ್‌ಫೋನ್‌ ಹಿಂಬದಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿರಲಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ Sony Lytia ಸೆನ್ಸಾರ್‌ ಅನ್ನು ಪಡೆದಿರಲಿದೆ. ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯದಲ್ಲಿ ಇರಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್‌ 32MP ಕ್ಯಾಮೆರಾ ರಚನೆ ಪಡೆದುಕೊಂಡಿರಲಿದೆ. ಈ ಫೋನ್‌ 27W ರಿವರ್ಸ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿರುವ ಸಾಧ್ಯತೆಗಳು ಇವೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile