ಒಪ್ಪೋ ಕಂಪನಿಯ ಬಹುನಿರೀಕ್ಷಿತ Oppo A6c ಮೊಬೈಲ್ ಇಂದು (ಮೇ 26 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಬಜೆಟ್ ದರದಲ್ಲಿ ನೂತನವಾಗಿ ಎಂಟ್ರಿ ಕೊಟ್ಟಿರುವ ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ Unisoc T7250 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 7,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವುದು ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಮೊಬೈಲ್ ಫೆದರ್ ವೈಟ್ ಮತ್ತು ಸ್ಟೋನ್ ಬ್ರೌನ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಹಾಗಾದರೇ ಒಪ್ಪೋ A6c ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Oppo K14 5G ಬೆಲೆಯಲ್ಲಿ ಭಾರೀ ಇಳಿಕೆ! 50MP ಕ್ಯಾಮೆರಾ, 7000mAh ಬ್ಯಾಟರಿ ಸಪೋರ್ಟ್ ಇದೆ
ಒಪ್ಪೋ ಕಂಪನಿಯ ಒಪ್ಪೋ A6c ಮೊಬೈಲ್ ಎರಡು ವೇರಿಯಂಟ್ ಆಯ್ಕೆಗಳಲ್ಲಿ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಈ ಮೊಬೈಲ್‌ನ 4GB RAM + 64GB ಸ್ಟೋರೇಜ್ ವೇರಿಯಂಟ್ 13,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 4GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 16,999 ರೂ.ಗಳು ಆಗಿದೆ. ಇನ್ನು ಈ ಫೋನ್ ಫೆದರ್ ವೈಟ್ ಮತ್ತು ಸ್ಟೋನ್ ಬ್ರೌನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಪ್ರಸ್ತುತ ಭಾರತದಲ್ಲಿ ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಗೆ ಲಭ್ಯವಿದೆ.
ಒಪ್ಪೋ A6c ಮೊಬೈಲ್ 6.75 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ 120Hz ರಿಫ್ರೆಶ್ ರೇಟ್ ಹಾಗೂ 900 nits ಬ್ರೈಟ್‌ನೆಸ್ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಇದರ ಸ್ಕ್ರೀನ್ 720 x 1,570 ಪಿಕ್ಸೆಲ್ ರೆಸಲ್ಯೂಶನ್ ಹೊಂದಿರುವ ಜೊತೆಗೆ ಶೇ. 90.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಫೋನ್ ಆಕ್ಟಾ ಕೋರ್ Unisoc T7250 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 4GB RAM + 64GB ಹಾಗೂ 4GB + 128GB ಸ್ಟೋರೇಜ್ ಆಯ್ಕೆ ಪಡೆದಿದೆ. ಹಾಗೆಯೇ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಒಳಗೊಂಡಿದೆ. ಅಲ್ಲದೇ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಈ ಫೋನ್ IP64 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಒಪ್ಪೋ A6c ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13MP ಸೆನ್ಸಾರ್ ಆಗಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 15W ವೈರ್ಡ್ ಚಾರ್ಜಿಂಗ್ ಬೆಂಬಲ ಹೊಂದಿದೆ.