7,000mAh ಬ್ಯಾಟರಿ ಒಳಗೊಂಡ OPPO F31 Pro+ 5G ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ!
ಅಮೆಜಾನ್‌ನಲ್ಲಿ ಒಪ್ಪೋ F31 ಪ್ರೊ+ 5G ಬೊಂಬಾಟ್ ಆಫರ್‌ನಲ್ಲಿ ಲಭ್ಯ
ಒಪ್ಪೋ F31 ಪ್ರೊ+ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ
ಒಪ್ಪೋ F31 ಪ್ರೊ+ 5G ಮೊಬೈಲ್ 7,000mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ
ಒಪ್ಪೋ ಮೊಬೈಲ್ ಸಂಸ್ಥೆಯ OPPO F31 Pro+ 5G ಮೊಬೈಲ್ ಬಿಗ್ ಬ್ಯಾಟರಿ ಹಾಗೂ ಕ್ಯಾಮೆರಾ ಫೀಚರ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 7 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಜೆಮ್‌ಸ್ಟೋನ್ ಬ್ಲೂ, ಹಿಮಾಲಯ ವೈಟ್ ಮತ್ತು ಫೆಸ್ಟಿವಲ್ ಪಿಂಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ F31 ಪ್ರೊ+ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Samsung Galaxy F36 5G ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ! ಟ್ರಿಪಲ್ ಕ್ಯಾಮೆರಾ ಸೌಲಭ್ಯ
OPPO F31 Pro+ 5G ಬೆಲೆಯಲ್ಲಿ ಸಖತ್ ಇಳಿಕೆ
ಅತ್ಯುತ್ತಮ ಕ್ಯಾಮೆರಾ, ಆಕರ್ಷಕ ಲುಕ್ ಸೇರಿದಂತೆ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ಒಪ್ಪೋ F31 ಪ್ರೊ+ 5G ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಅತ್ಯುತ್ತಮ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 37,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 32,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ಜೆಮ್‌ಸ್ಟೋನ್ ಬ್ಲೂ, ಹಿಮಾಲಯ ವೈಟ್ ಮತ್ತು ಫೆಸ್ಟಿವಲ್ ಪಿಂಕ್ ಕಲರ್ ಆಯ್ಕೆಗಳಲ್ಲಿ ಲಭ್ಯ.

ಒಪ್ಪೋ F31 ಪ್ರೊ+ 5G ಫೀಚರ್ಸ್ ಮಾಹಿತಿ
ಒಪ್ಪೋ F31 ಪ್ರೊ+ 5G ಮೊಬೈಲ್ 6.8 ಇಂಚಿನ FHD+ ಫ್ಲೆಕ್ಸಿಬಲ್ AMOLED ಡಿಸ್‌ಪ್ಲೇ ಪಡೆದುಕೊಂಡಿದ್ದು, 120Hz ರಿಫ್ರೆಶ್ ರೇಟ್ ಸೌಲಭ್ಯ ಪಡೆದಿದೆ. ಹಾಗೆಯೇ ಈ ಮೊಬೈಲ್ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7 ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB + 256GB ಹಾಗೂ 12GB RAM + 256GB ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದ್ದು ಇದಕ್ಕೆ ಪೂರಕವಾಗಿ 80W SUPERVOOC ಫಾಸ್ಟ್ ಚಾರ್ಜಿಂಗ್ ನೀಡುತ್ತದೆ.
ಹಾಗೆಯೇ ಒಪ್ಪೋ F31 ಪ್ರೊ+ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರ ಮೊದಲ ಕ್ಯಾಮೆರಾ 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾ 2MP ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 32MP ಸೆನ್ಸಾರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಅಲ್ಲದೇ ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ ಈ ಫೋನ್ IP69/IP68/IP66 ರೇಟಿಂಗ್ ಸೌಲಭ್ಯ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
