ನೂತನ Oppo F33 5G ಸ್ಮಾರ್ಟ್‌ಫೋನ್ ಈಗ ಖರೀದಿಗೆ ಲಭ್ಯ! ಆಕರ್ಷಕ ಬೆಲೆ
ನೂತನ ಒಪ್ಪೋ F33 5G ಇದೀಗ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯ
ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಪ್ರೊಸೆಸರ್ ಹೊಂದಿದೆ
ಒಪ್ಪೋ F33 ಫೋನ್ ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಕಲರ್ ಆಯ್ಕೆ ಪಡೆದುಕೊಂಡಿದೆ
ಜನಪ್ರಿಯ ಒಪ್ಪೋ ಮೊಬೈಲ್ ಬ್ರಾಂಡ್ ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ Oppo F33 5G ಮೊಬೈಲ್ ಆಕರ್ಷಕ ಫೀಚರ್ಸ್‌ಗಳ ಮೂಲಕ ಮಾರುಕಟ್ಟೆಯ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ಏಪ್ರಿಲ್ 29 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಪ್ರಾರಂಭ ಮಾಡಿದೆ. ಇನ್ನು ಈ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಮೊಬೈಲ್ 80W SuperVOOC ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಒಳಗೊಂಡಿರುವ ಜೊತೆಗೆ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಹಾಗೆಯೇ ಸ್ಮಾರ್ಟ್‌ಫೋನ್ ಅಲ್ಲದೇ ಇದು ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೆ ಒಪ್ಪೋ F33 5G ಮೊಬೈಲ್‌ನ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Vivo V50 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇಳಿಕೆ! 6,000mAh ಬ್ಯಾಟರಿ ಸೌಲಭ್ಯ
Oppo F33 5G ಫೋನ್ ಸೇಲ್ ಮಾಹಿತಿ
ಒಪ್ಪೋ F33 5G ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯ ಗಮನ ಸೆಳೆದಿದೆ. ಈ ಮೊಬೈಲ್ ಇಂದು (ಏಪ್ರಿಲ್ 29 ರಂದು) 12AM ರಂದು ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಿದೆ. ಒಪ್ಪೋ F33 5G ಫೋನಿನ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 31,999 ರೂ.ಗಳು ಆಗಿದೆ. ಹಾಗೆಯೇ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 34,999 ರೂ.ಗಳು ಆಗಿದೆ. ಅದೇ ರೀತಿ 8GB + 256GB ವೇರಿಯಂಟ್ ಬೆಲೆಯು 37,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಗೆ ಲಭ್ಯವಾಗಲಿದೆ.

ಒಪ್ಪೋ F33 5G ಮೊಬೈಲ್ ಫೀಚರ್ಸ್
ಒಪ್ಪೋ F33 5G ಮೊಬೈಲ್ 6.57 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 1,400 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66 + IP68 + IP69 ರೇಟಿಂಗ್ ಸಪೋರ್ಟ್ ಒಳಗೊಂಡಿದೆ.
ಒಪ್ಪೋ F33 5G ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಹಾಗೆಯೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 16 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile