ಸ್ಟೈಲಿಶ್‌ ಲುಕ್‌ ಇರುವ Oppo F33 5G ಬೆಲೆಯಲ್ಲಿ ಈಗ ಭಾರೀ ಇಳಿಕೆ!..ಖರೀದಿ ಮಾಡ್ತೀರಾ?

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಒಪ್ಪೋ F33 5G ಫೋನಿಗೆ ಬಿಗ್ ಡಿಸ್ಕೌಂಟ್‌

ಒಪ್ಪೋ F33 5G ಮೊಬೈಲ್‌ 7,000mAh ಬ್ಯಾಟರಿ ಸಪೋರ್ಟ್‌ ಪಡೆದಿದೆ

ಒಪ್ಪೋ F33 5G ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಪ್ರೊಸೆಸರ್‌ ಹೊಂದಿದೆ

ಸ್ಟೈಲಿಶ್‌ ಲುಕ್‌ ಇರುವ Oppo F33 5G ಬೆಲೆಯಲ್ಲಿ ಈಗ ಭಾರೀ ಇಳಿಕೆ!..ಖರೀದಿ ಮಾಡ್ತೀರಾ?

ಒಪ್ಪೋ ಕಂಪನಿಯ Oppo F33 5G ಮೊಬೈಲ್‌ ಆಕರ್ಷಕ ಫಿಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್‌ ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಒಪ್ಪೋ F33 5G ಮೊಬೈಲ್‌ಗೆ ಲಭ್ಯವಿರುವ ಆಫರ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Samsung Galaxy A17 5G ಬೆಲೆಯಲ್ಲಿ ಈಗ ಜಬರ್ದಸ್ತ್‌ ಡಿಸ್ಕೌಂಟ್‌; ಆಫರ್‌ ಮಾಹಿತಿ ಇಲ್ಲಿದೆ

Oppo F33 5G ಬೆಲೆಯಲ್ಲಿ ಬಿಗ್ ಆಫರ್

ಸ್ಟೈಲಿಶ್‌ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ಒಪ್ಪೋ F33 5G ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 6GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 48,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 34,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್‌ ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಬಣ್ಣಗಳ ಕಲರ್‌ ಆಯ್ಕೆಗಳಲ್ಲಿ ಲಭ್ಯ.

Oppo F33 5G

ಒಪ್ಪೋ F33 5G ಮೊಬೈಲ್‌ ಫೀಚರ್ಸ್‌

ಒಪ್ಪೋ F33 5G ಫೋನ್‌ 6.57 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 1,400 nits ಪೀಕ್‌ ಬ್ರೈಟ್ನೆಸ್‌ ಸಪೋರ್ಟ್‌ ಹೊಂದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66 + IP68 + IP69 ರೇಟಿಂಗ್‌ ಸಪೋರ್ಟ್‌ ಒಳಗೊಂಡಿದೆ.

ಒಪ್ಪೋ F33 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಹಾಗೆಯೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 16 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಹಾಗೆಯೇ ಈ ಮೊಬೈಲ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 80W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile