ಒಪ್ಪೋ ಕಂಪನಿಯ Oppo F33 5G ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭಾರೀ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ F33 5G ಮೊಬೈಲ್‌ಗೆ ಲಭ್ಯವಿರುವ ಆಫರ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Samsung Galaxy A17 5G ಬೆಲೆಯಲ್ಲಿ ಈಗ ಜಬರ್ದಸ್ತ್ ಡಿಸ್ಕೌಂಟ್; ಆಫರ್ ಮಾಹಿತಿ ಇಲ್ಲಿದೆ
ಸ್ಟೈಲಿಶ್ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್ ಪ್ರಿಯರ ಗಮನ ಸೆಳೆದಿರುವ ಒಪ್ಪೋ F33 5G ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 48,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 34,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಬಣ್ಣಗಳ ಕಲರ್ ಆಯ್ಕೆಗಳಲ್ಲಿ ಲಭ್ಯ.
ಒಪ್ಪೋ F33 5G ಫೋನ್ 6.57 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 1,400 nits ಪೀಕ್ ಬ್ರೈಟ್ನೆಸ್ ಸಪೋರ್ಟ್ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66 + IP68 + IP69 ರೇಟಿಂಗ್ ಸಪೋರ್ಟ್ ಒಳಗೊಂಡಿದೆ.
ಒಪ್ಪೋ F33 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಹಾಗೆಯೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 16 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.