80W SuperVOOC ಚಾರ್ಜಿಂಗ್ ಇರುವ Oppo F33 5G ಫೋನ್ ಈಗ ಆಫರ್‌ನಲ್ಲಿ ಲಭ್ಯ!
ಫ್ಲಿಪ್‌ಕಾರ್ಟ್‌ನಲ್ಲಿ ಒಪ್ಪೋ F33 5G ಬಿಗ್ ಡಿಸ್ಕೌಂಟ್‌ನಲ್ಲಿ ಲಭ್ಯ
ಒಪ್ಪೋ F33 5G ಸ್ಮಾರ್ಟ್‌ಫೋನ್ 16MP ಸೆಲ್ಫಿ ಕ್ಯಾಮೆರಾ ರಚನೆ ಪಡೆದಿದೆ
ಒಪ್ಪೋ F33 5G ಮೊಬೈಲ್ 7,000mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ
ಒಪ್ಪೋ ಸಂಸ್ಥೆಯ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾದ Oppo F33 5G ಮೊಬೈಲ್ ಬಿಗ್ ಬ್ಯಾಟರಿ ಹಾಗೂ ಫಾಸ್ಟ್ ಚಾರ್ಜಿಂಗ್ ಸೌಲಭ್ಯದ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಅತ್ಯುತ್ತಮ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಅಲ್ಲದೇ ಈ ಫೋನ್ ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಬಣ್ಣಗಳ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಒಪ್ಪೋ F33 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಅಂತೂ ಇಂತೂ ಲಾಂಚ್ ಆಯ್ತು Redmi Turbo 5 ಸ್ಮಾರ್ಟ್‌ಫೋನ್! 100W ಫಾಸ್ಟ್ ಚಾರ್ಜಿಂಗ್ ಹೈಲೈಟ್
Oppo F33 5G ಬೆಲೆಯಲ್ಲಿ ಬಿಗ್ ಡಿಸ್ಕೌಂಟ್
ಉತ್ತಮ ಕ್ಯಾಮೆರಾ ಸೇರಿದಂತೆ ಆಕರ್ಷಕ ಫೀಚರ್ಸ್ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿರುವ ಒಪ್ಪೋ F33 5G ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 52,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 34,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಬಣ್ಣಗಳ ಕಲರ್ ಆಯ್ಕೆಗಳಲ್ಲಿ ಲಭ್ಯ.

ಒಪ್ಪೋ F33 5G ಮೊಬೈಲ್ ಫೀಚರ್ಸ್
ಒಪ್ಪೋ F33 5G ಮೊಬೈಲ್ 6.57 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 1,400 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66 + IP68 + IP69 ರೇಟಿಂಗ್ ಸಪೋರ್ಟ್ ಒಳಗೊಂಡಿದೆ.
ಒಪ್ಪೋ F33 5G ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಹಾಗೆಯೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 16 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
