ಇಂದಿನಿಂದ Oppo F33 Pro 5G ಮೊಬೈಲ್‌ ಖರೀದಿಗೆ ಲಭ್ಯ! ಬೆಲೆ ಎಷ್ಟು ನೋಡಿ

HIGHLIGHTS

ಇಂದು (ಏಪ್ರಿಲ್‌ 23 ರಿಂದ) ಒಪ್ಪೋ F33 ಪ್ರೊ 5G ಖರೀದಿಗೆ ಲಭ್ಯ

ಈ ಹೊಸ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಪ್ರೊಸೆಸರ್‌ ಹೊಂದಿದೆ

ಒಪ್ಪೋದ ಈ ಫೋನ್‌ ಮಿಸ್ಟಿ ಫಾರೆಸ್ಟ್, ಪ್ಯಾಶನ್ ರೆಡ್ ಮತ್ತು ಸ್ಟಾರಿ ಬ್ಲೂ ಕಲರ್ ಆಯ್ಕೆ ಪಡೆದಿದೆ

ಒಪ್ಪೋ ಕಂಪನಿಯ Oppo F33 Pro 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಮೊಬೈಲ್‌ ಇಂದು (ಏಪ್ರಿಲ್‌ 23 ರಂದು) ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಪ್ರಾರಂಭ ಮಾಡಲಿದೆ. ಈ ಹೊಸ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್‌ ಒಳಗೊಂಡಿರುವ ಜೊತೆಗೆ 7,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್‌ ಹೊಂದಿದೆ. ಅಂದಹಾಗೆ ಈ ಫೋನ್‌ ಮಿಸ್ಟಿ ಫಾರೆಸ್ಟ್, ಪ್ಯಾಶನ್ ರೆಡ್ ಮತ್ತು ಸ್ಟಾರಿ ಬ್ಲೂ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಒಪ್ಪೋ F33 ಪ್ರೊ 5G ಫೋನಿನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : RBI New Rule: OTP ಇಲ್ಲದೆ ಬಿಲ್ ಪಾವತಿ ಸಾಧ್ಯ! ಚಂದಾದಾರಿಕೆಗಳ ಬಿಲ್ ಪಾವತಿಗೆ ಹೊಸ ವ್ಯವಸ್ಥೆ

Oppo F33 Pro 5G ಮೊಬೈಲ್‌ ಸೇಲ್‌ ಮಾಹಿತಿ

ಒಪ್ಪೋ F33 ಪ್ರೊ 5G ಸ್ಮಾರ್ಟ್‌ಫೋನ್‌ ಇಂದು (ಏಪ್ರಿಲ್‌ 23 ರಂದು) ಮಧ್ಯಾಹ್ನ 12 ರಂದು ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ ಮೂಲಕ ಮಾರಾಟ ಶುರು ಮಾಡಲಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 37,999 ರೂ.ಗಳು ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 40,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಮಿಸ್ಟಿ ಫಾರೆಸ್ಟ್, ಪ್ಯಾಶನ್ ರೆಡ್ ಮತ್ತು ಸ್ಟಾರಿ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಗೆ ಲಭ್ಯವಾಗಲಿದೆ.

ಒಪ್ಪೋ F33 ಪ್ರೊ 5G ಮೊಬೈಲ್‌ ಫೀಚರ್ಸ್‌

ಹೊಸ ಒಪ್ಪೋ F33 ಪ್ರೊ 5G ಮೊಬೈಲ್‌ 6.57 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 1,400 nits ಪೀಕ್‌ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66 + IP68 + IP69K ರೇಟಿಂಗ್‌ ಸಪೋರ್ಟ್‌ ಒಳಗೊಂಡಿದೆ.

ಹಾಗೆಯೇ ಒಪ್ಪೋ F33 ಪ್ರೊ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 80W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :