ಒಪ್ಪೋ ಇತ್ತೀಚಿಗೆ ಹೊಸದಾಗಿ ಬಿಡುಗಡೆ ಮಾಡಿರುವ Oppo F33 Pro 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್ ನಾಳೆ (ಏಪ್ರಿಲ್ 23 ರಂದು) ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಶುರು ಮಾಡಲಿದೆ. ಈ ನೂತನ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್ ಒಳಗೊಂಡಿರುವ ಜೊತೆಗೆ 7,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಅಲ್ಲದೇ ಈ ಫೋನ್ ಮಿಸ್ಟಿ ಫಾರೆಸ್ಟ್, ಪ್ಯಾಶನ್ ರೆಡ್ ಮತ್ತು ಸ್ಟಾರಿ ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಒಪ್ಪೋ F33 ಪ್ರೊ 5G ಫೋನಿನ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಭಾರೀ ಆಫರ್‌ನಲ್ಲಿ Redmi Note 15 Pro 5G ಖರೀದಿಸಲು ಇದುವೇ ಅತ್ಯುತ್ತಮ ಅವಕಾಶ!
ಒಪ್ಪೋ F33 ಪ್ರೊ 5G ಸ್ಮಾರ್ಟ್‌ಫೋನ್ ನಾಳೆ (ಏಪ್ರಿಲ್ 23 ರಂದು) ಮಧ್ಯಾಹ್ನ 12 ರಂದು ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 37,999 ರೂ.ಗಳು ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 40,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಮಿಸ್ಟಿ ಫಾರೆಸ್ಟ್, ಪ್ಯಾಶನ್ ರೆಡ್ ಮತ್ತು ಸ್ಟಾರಿ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಗೆ ಲಭ್ಯವಾಗಲಿದೆ.
ಹೊಸ ಒಪ್ಪೋ F33 ಪ್ರೊ 5G ಮೊಬೈಲ್ 6.57 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 1,400 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66 + IP68 + IP69K ರೇಟಿಂಗ್ ಸಪೋರ್ಟ್ ಒಳಗೊಂಡಿದೆ.
ಹಾಗೆಯೇ ಒಪ್ಪೋ F33 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.