ಸದ್ದಿಲ್ಲದೆ Oppo F33 Pro 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಹಾಗೂ ಫೀಚರ್ಸ್‌ ನೋಡಿ

HIGHLIGHTS

ಒಪ್ಪೋದ ಈ ಹೊಸ ಫೋನ್‌ 50MP ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ

ಒಪ್ಪೋ F33 ಪ್ರೊ ಮೊಬೈಲ್‌ 7,000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ

ಇದು ಮಿಸ್ಟಿ ಫಾರೆಸ್ಟ್, ಪ್ಯಾಶನ್ ರೆಡ್ ಮತ್ತು ಸ್ಟಾರಿ ಬ್ಲೂ ಕಲರ್‌ ಆಯ್ಕೆಯಲ್ಲಿ ಲಗ್ಗೆ ಇಟ್ಟಿದೆ

ಸದ್ದಿಲ್ಲದೆ Oppo F33 Pro 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಹಾಗೂ ಫೀಚರ್ಸ್‌ ನೋಡಿ

ಲೀಡಿಂಗ್‌ ಮೊಬೈಲ್‌ ಬ್ರಾಂಡ್‌ ಎನಿಸಿರುವ ಒಪ್ಪೋ ಸಂಸ್ಥೆಯು ಹೊಸದಾಗಿ Oppo F33 Pro 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಏಪ್ರಿಲ್‌ 15 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೀಡ್‌ರೇಂಜ್‌ ದರದಲ್ಲಿ ಎಂಟ್ರಿ ಕೊಟ್ಟಿರುವ ಈ ಹೊಸ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್‌ 7,000mAh ಬ್ಯಾಟರಿ ಸಪೋರ್ಟ್‌ ಒಳಗೊಂಡಿರುವ ಜೊತೆಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆ ಹೊಂದಿದೆ. ಅಲ್ಲದೇ ಇದು ಮಿಸ್ಟಿ ಫಾರೆಸ್ಟ್, ಪ್ಯಾಶನ್ ರೆಡ್ ಮತ್ತು ಸ್ಟಾರಿ ಬ್ಲೂ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೆ ಒಪ್ಪೋ F33 ಪ್ರೊ 5G ಮೊಬೈಲ್‌ನ ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 5000mAh ಬ್ಯಾಟರಿ ಇರುವ ಈ ಮೊಬೈಲ್‌ ಜಸ್ಟ್‌ 8,999 ರೂ.ಗಳಿಗೆ ಲಭ್ಯ! ಬೆಸ್ಟ್‌ ಆಫರ್‌ ಇದೆ

Oppo F33 Pro 5G ಬೆಲೆ ಹಾಗೂ ಲಭ್ಯತೆ

ನೂತನ ಒಪ್ಪೋ F33 ಪ್ರೊ 5G ಸ್ಮಾರ್ಟ್‌ಫೋನ್‌ ಎರಡು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳೊಂದಿಗೆ ಬಂದಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 37,999 ರೂ.ಗಳು ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 40,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಮಿಸ್ಟಿ ಫಾರೆಸ್ಟ್, ಪ್ಯಾಶನ್ ರೆಡ್ ಮತ್ತು ಸ್ಟಾರಿ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಗೆ ಲಭ್ಯವಾಗಲಿದೆ.

Oppo F33 Pro 5g

ಒಪ್ಪೋ F33 ಪ್ರೊ 5G ಮೊಬೈಲ್‌ ಫೀಚರ್ಸ್‌

ಹೊಸ ಒಪ್ಪೋ F33 ಪ್ರೊ 5G ಮೊಬೈಲ್‌ 6.57 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 1,400 nits ಪೀಕ್‌ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66 + IP68 + IP69K ರೇಟಿಂಗ್‌ ಸಪೋರ್ಟ್‌ ಒಳಗೊಂಡಿದೆ.

ಹಾಗೆಯೇ ಒಪ್ಪೋ F33 ಪ್ರೊ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 80W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo