Oppo F33 Pro 5g
ಲೀಡಿಂಗ್ ಮೊಬೈಲ್ ಬ್ರಾಂಡ್ ಎನಿಸಿರುವ ಒಪ್ಪೋ ಸಂಸ್ಥೆಯು ಹೊಸದಾಗಿ Oppo F33 Pro 5G ಸ್ಮಾರ್ಟ್‌ಫೋನ್ ಅನ್ನು ಇಂದು (ಏಪ್ರಿಲ್ 15 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೀಡ್‌ರೇಂಜ್ ದರದಲ್ಲಿ ಎಂಟ್ರಿ ಕೊಟ್ಟಿರುವ ಈ ಹೊಸ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಸಪೋರ್ಟ್ ಒಳಗೊಂಡಿರುವ ಜೊತೆಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆ ಹೊಂದಿದೆ. ಅಲ್ಲದೇ ಇದು ಮಿಸ್ಟಿ ಫಾರೆಸ್ಟ್, ಪ್ಯಾಶನ್ ರೆಡ್ ಮತ್ತು ಸ್ಟಾರಿ ಬ್ಲೂ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೆ ಒಪ್ಪೋ F33 ಪ್ರೊ 5G ಮೊಬೈಲ್‌ನ ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 5000mAh ಬ್ಯಾಟರಿ ಇರುವ ಈ ಮೊಬೈಲ್ ಜಸ್ಟ್ 8,999 ರೂ.ಗಳಿಗೆ ಲಭ್ಯ! ಬೆಸ್ಟ್ ಆಫರ್ ಇದೆ
ನೂತನ ಒಪ್ಪೋ F33 ಪ್ರೊ 5G ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳೊಂದಿಗೆ ಬಂದಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 37,999 ರೂ.ಗಳು ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 40,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್ ಮಿಸ್ಟಿ ಫಾರೆಸ್ಟ್, ಪ್ಯಾಶನ್ ರೆಡ್ ಮತ್ತು ಸ್ಟಾರಿ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಗೆ ಲಭ್ಯವಾಗಲಿದೆ.
ಹೊಸ ಒಪ್ಪೋ F33 ಪ್ರೊ 5G ಮೊಬೈಲ್ 6.57 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 1,400 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66 + IP68 + IP69K ರೇಟಿಂಗ್ ಸಪೋರ್ಟ್ ಒಳಗೊಂಡಿದೆ.
ಹಾಗೆಯೇ ಒಪ್ಪೋ F33 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.