ಸ್ಟೈಲಿಶ್ ಲುಕ್ ಹೊಂದಿರುವ OPPO F35 Pro 5G ಮೊಬೈಲ್ ಈಗ ಭರ್ಜರಿ ಡಿಸ್ಕೌಂಟ್ನಲ್ಲಿ ಲಭ್ಯ!
ಫ್ಲಿಪ್ಕಾರ್ಟ್ನಲ್ಲಿ ಒಪ್ಪೋ F35 ಪ್ರೊ ಫೋನಿಗೆ ಬಿಗ್ ಡಿಸ್ಕೌಂಟ್
ಒಪ್ಪೋ F35 ಪ್ರೊ ಮೊಬೈಲ್ 8,000mAh ಬ್ಯಾಟರಿ ಪಡೆದಿದೆ
ಒಪ್ಪೋ F35 ಪ್ರೊ ಮೊಬೈಲ್ ಆಕರ್ಷಕ ಕಲರ್ಗಳಲ್ಲಿ ಲಭ್ಯ
ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ಆಯ್ದ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ OPPO F35 Pro 5G ಸ್ಮಾರ್ಟ್ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 50MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ನಲ್ಲಿ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಒಪ್ಪೋ F35 ಪ್ರೊ ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
OPPO F35 Pro 5G ಈಗ ಡಿಸ್ಕೌಂಟ್ನಲ್ಲಿ ಲಭ್ಯ
ಮೀಡ್ರೇಂಜ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಒಪ್ಪೋ F35 ಪ್ರೊ ಮೊಬೈಲ್ ಫ್ಲಿಪ್ಕಾರ್ಟ್ನಲ್ಲಿ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 74,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 45,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಸನ್ರೈಸ್ ಆರೆಂಜ್, ಬ್ರೌನ್ ಹಾಗೂ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ಒಪ್ಪೋ F35 ಪ್ರೊ ಮೊಬೈಲ್ ಫೀಚರ್ಸ್
ಒಪ್ಪೋ F35 ಪ್ರೊ ಸ್ಮಾರ್ಟ್ಫೋನ್ 6.78 ಇಂಚಿನ 1.5K LTPS OLED ಡಿಸ್ಪ್ಲೇ ಹೊಂದಿದ್ದು, ಇದರೊಂದಿಗೆ ಈ ಡಿಸ್ಪ್ಲೇಯು 120Hz ರಿಫ್ರೆಶ್ ರೇಟ್ ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7360 ಚಿಪ್ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಈ ಸ್ಮಾರ್ಟ್ಫೋನ್ 8,000mAh ಬ್ಯಾಟರಿಯನ್ನು ಪಡೆದಿದ್ದು, ದೀರ್ಘಾವಧಿ ಬ್ಯಾಕ್ಅಪ್ ಒದಗಿಸಲಿದೆ.
ಒಪ್ಪೋ F35 ಪ್ರೊ ಸ್ಮಾರ್ಟ್ಫೋನ್ ಹಿಂಬದಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಹಾಗೂ ಸೆಕೆಂಡರಿ ಕ್ಯಾಮೆರಾವು 8MP ಕ್ಯಾಮೆರಾ ಸೌಲಭ್ಯ ಪಡೆದಿದೆ. ಈ ಫೋನ್ 50MP ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಅಲ್ಲದೇ IP66/ IP68/ IP69K ರೇಟಿಂಗ್ ಸೌಲಭ್ಯದೊಂದಿಗೆ ನೀರು ಮತ್ತು ಧೂಳಿನ ವಿರುದ್ಧದ ರಕ್ಷಣಾ ಪ್ರಮಾಣೀಕರಣವನ್ನು ಪಡೆದಿದೆ.